ಸರ್ಕಾರಿ ಶಾಲೆಗಳಲ್ಲಿಯೂ ಸಿ.ಬಿ.ಎಸ್.ಸಿ ಪಠ್ಯಕ್ರಮ ನೀಡಲು ಕ್ರಮವಹಿಸಲಾಗುವುದು / ಶಿಕ್ಷಣ ಸಚಿವ ಮಧು ಬಂಗಾರಪ್ಪ

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ಇನ್ನು ಮುಂದೆ ಸರ್ಕಾರಿ ಶಾಲೆಗಳಲ್ಲಿ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳನ್ನು ಸಿ.ಬಿ.ಎಸ್.ಇ. ಪಠ್ಯಕ್ರಮ ನೀಡಲು ಕ್ರಮವಹಿಸಲಾಗುವುದು ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದರು.

ಬೆಳಗಾಮಿನ ವಿಧಾನಪರಿಷತ್ತು ಅಧಿವೇಶನದಲ್ಲಿ ಎಂ.ಎಲ್.ಸಿ.ಅನಿಲ್‌ಕುಮಾರ್ ರವರ ಪ್ರಶ್ನೆಗೆ ಉತ್ತರಿಸಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ೨೫ ಸಾವಿರ ಬಡ ಮಕ್ಕಳಿಗೆ ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಶಿಕ್ಷಣ ನೀಡುವಂತೆ ಕ್ರಮವಹಿಸಲಾಗಿದೆ. ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹಾಗೂ ಬಡ ಮಕ್ಕಳಿಗೆ ಸಹ ಈ ಸೌಲಭ್ಯ ಪಡೆಯುತ್ತಿರುತ್ತಾರೆ ಎಂದು ತಿಳಿಸಿದರು.

ಅಧಿವೇಶನದಲ್ಲಿ ಎಂ.ಎಲ್.ಸಿ.ಅನಿಲ್ ಕುಮಾರ್ ಆರ್‌ಟಿಇ ಕಾಯ್ದೆಯ ಉದ್ದೇಶದ ಕುರಿತು ಶಿಕ್ಷಣ ಸಚಿವರನ್ನು ಪ್ರಶ್ನಿಸಿ ೨೦೦೯ ರಲ್ಲಿ ಮನಮೋಹನ್ ಸಿಂಗ್ ರವರ ಅಧಿಕಾರವಧಿಯಲ್ಲಿ ಆದೇಶಗೊಂಡಿರುವAತೆ ಎಲ್ಲರಿಗೂ ಕಡ್ಡಾಯ ಶಿಕ್ಷಣ ಮತ್ತು ಉಚಿತವಾಗಿ ೬ ರಿಂದ ೧೪ ವರ್ಷದ ಮಕ್ಕಳಿಗೆ ಶಿಕ್ಷಣ ನೀಡಬೇಕೆಂದು ಕ್ರಮ ಕೈಗೊಳ್ಳಲಾಗಿದೆ.

ಅದರಂತೆ ೨೦೧೫ ರಲ್ಲಿ ಕರ್ನಾಟಕ ಸರ್ಕಾರವು ಆರ್‌ಟಿಇ ಕಾಯ್ದೆ ರಚಿಸಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಶೇ.೨೫ ರಷ್ಟು ಮೀಸಲಾತಿ ನೀಡಿ, ಎಲ್ಲರಿಗೂ ಉಚಿತ ಶಿಕ್ಷಣ ನೀಡಬೇಕೆಂದು ಕ್ರಮ ಕೈಗೊಂಡಿತ್ತು.

ಆರ್‌ಟಿಇ ಕಾಯ್ದೆಯ ಅನುಷ್ಠಾನದಿಂದ ೧ ರಿಂದ ೮ನೇ ತರಗತಿವರೆಗೆ ಮಕ್ಕಳ ಪ್ರವೇಶ ಶುಲ್ಕವನ್ನು ಸರ್ಕಾರವೇ ನೀಡುತ್ತಿದ್ದು, ೮ನೇ ತರಗತಿಯಿಂದ ದ್ವಿತೀಯ ಪಿಯುಸಿ ವರೆಗೂ ಈ ಯೋಜನೆಯನ್ನು ವಿಸ್ತರಿಸುವುದರಿಂದ ಗ್ರಾಮೀಣ ಮತ್ತು ನಗರ ಪ್ರದೇಶದ ಬಡ ಮಕ್ಕಳಿಗೆ ಅನುಕೂಲವಾಗುವುದು ಹಾಗೂ ಸರ್ಕಾರಿ ಶಾಲೆಗಳಲ್ಲಿ ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ ಮಾದರಿಯ ಪಠ್ಯಕ್ರಮವನ್ನು ಅಳವಡಿಸಿ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದರು.

ಚಿತ್ರ ೧೬ ಕೆ.ಎಲ್.ಆರ್. ೦೨ : ಎಂ.ಎಲ್.ಸಿ. ಅನಿಲ್ ಕುಮಾರ್ ರವರ ಭಾವಚಿತ್ರ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net