ಸರ್ಜಿ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಸತೀಶ್ ಇನ್ನಿಲ್ಲ

11 smg dr.satheesh
Published on

ಶಿವಮೊಗ್ಗ: ನಗರದ ಪ್ರತಿಷ್ಠಿತ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತೀವ್ರ ನಿಗಾ ಘಟಕದ ತಜ್ಞ ವೈದ್ಯರು ಹಾಗೂ ಆಸ್ಪತ್ರೆಯ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಸತೀಶ್ (46) ಅವರು ಅನಾರೋಗ್ಯದಿಂದ ಬುಧವಾರ ಬೆಳಗ್ಗೆ ನಿಧನ ಹೊಂದಿದರು.

ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸ್ತ್ರೀ ರೋಗ ಮತ್ತು ಪ್ರಸೂತಿ ತಜ್ಞೆ, ಪತ್ನಿ ಡಾ. ಚೇತನಾ ಹಾಗೂ ಪುತ್ರ, ಪುತ್ರಿಯವನ್ನು ಅಗಲಿದ್ದಾರೆ. ಕಳೆದ ಏಳೆಂಟು ವರ್ಷಗಳಿಂದ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಮೂಲತಃ ದಾವಣಗೆರೆ ಜಿಲ್ಲೆಯ ತ್ಯಾವಣಗಿ ಗ್ರಾಮದವರು.

ಅಂತಿಮ ದರ್ಶನ ಮತ್ತು ಅಂತ್ಯಸಂಸ್ಕಾರ: ಗೋಪಾಳದ ರಂಗನಾಥ ಬಡಾವಣೆಯ ಮೊದಲ ತಿರುವಿನ ಶ್ರಿನಿಧಿ ಶಾಮಿಯಾನ ಪಕ್ಕದ ಸೌಪರ್ಣಿಕಾ ನಿಲಯ, ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬೆಳಗ್ಗೆ ಮೃತರ ಪಾರ್ಥೀವ ಶರೀರದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಸ್ವಗ್ರಾಮವಾದ ದಾವಣಗೆರೆ ಜಿಲ್ಲೆಯ ತ್ಯಾವಣಗಿಗೆ ತೆರಳಿ ಮಧ್ಯಾಹ್ನ ಅಂತಿಮ ಸಂಸ್ಕಾರ ನೆರವೇರಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net