ಸಹಭಾಗಿತ್ವದಿಂದ ಶೈಕ್ಷಣಿಕ ಚಟುವಟಿಕೆ ಯಶಸ್ಸು

CTD ----05
Published on

ಚಿತ್ರದುರ್ಗ: ಸಮನ್ವಯತೆ, ಸಹಭಾಗಿತ್ವದಿಂದ ಶೈಕ್ಷಣಿಕ ಚಟುವಟಿಕೆಗಳಲ್ಲಿ ಯಶಸ್ಸು ಪಡೆಯಲು ಸಾಧ್ಯ ಎಂದು ರಾಜ್ಯಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಸರ್ವಮಂಗಳ ಹೇಳಿದರು.

ಆಯುಷ್ಮಾನ್ ಭಾರತ್ ಯೋಜನೆ ಶಾಲಾ ಆರೋಗ್ಯ ಮತ್ತು ಕ್ಷೇಮ ಕಾರ್ಯಕ್ರಮ ಕುರಿತು ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ ಡಯಟ್ ಪ್ರಾಂಶುಪಾಲರು ಎನ್‌ಪಿಇಪಿ ನೋಡಲ್ ಅಧಿಕಾರಿಗಳಿಗೆ ಡಿಎಸ್‌ಇಆರ್‌ಟಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಡಯಟ್‌ನಿಂದ ಸಲ್ಲಿಸಿದ ರಾಜ್ಯಮಟ್ಟದ ಪಾತ್ರಾಭಿನಯ ಮತ್ತು ಜಾನಪದ ನೃತ್ಯ ಸ್ಪರ್ಧಾ ಚಟುವಟಿಕೆಗಳ ವರದಿ ಸ್ವೀಕರಿಸಿ ಮಾತನಾಡಿದರು.

ಪ್ರಸಕ್ತ ವರ್ಷದ ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆಯಡಿ ಚಿತ್ರದುರ್ಗ ಡಯಟ್‌ನಿಂದ 34 ಶೈಕ್ಷಣಿಕ ಜಿಲ್ಲೆ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ರಾಜ್ಯಮಟ್ಟದ ಸ್ಪರ್ಧಾ ಕಾರ್ಯಕ್ರಮದ ಯಶಸ್ಸಿಗೆ ಹರ್ಷ ವ್ಯಕ್ತಪಡಿಸಿದರು.

2025-26ನೇ ಶೈಕ್ಷಣಿಕ ವರ್ಷದಲ್ಲಿ ಎಲ್ಲ ಶೈಕ್ಷಣಿಕ ಜಿಲ್ಲೆಗಳಲ್ಲಿ ಎನ್‌ಪಿಇಪಿಯಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ, ಮಾದಕ ವಸ್ತುಗಳ ದುರ್ಬಳಕೆ ತಡೆ, ಹದಿಹರೆಯ ಶಿಕ್ಷಣ, ಗ್ರಾಮ ದತ್ತು ಯೋಜನೆ, ಅಂತರ್ಜಾಲ ಸದ್ಬಳಕೆ, ಒತ್ತಡ ನಿವಾರಣೆ, ಆಪ್ತ ಸಮಾಲೋಚನೆ, ತಾಯಂದಿರ ಸಭೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net