

ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು.
ಸಾಂಸ್ಕೃತಿಕ ಸ್ಪರ್ಧೆಯ ಪದವಿ ಕಾಲೇಜು ವಿಭಾಗದಲ್ಲಿ ಕೊಯಮತ್ತೂರಿನ ಜೆಎಸ್‌ಎಸ್ ನ್ಯಾಚುರೋಪಥಿ ಮತ್ತು ಯೋಗಿಕ್ ಸೈನ್ಸ್ ಸಂಸ್ಥೆ, ಪ್ರೌಢಶಾಲೆ ವಿಭಾಗದಲ್ಲಿ ಸುತ್ತೂರಿನ ಜೆಎಸ್‌ಎಸ್ ಪ್ರೌಢಶಾಲೆ, ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸುತ್ತೂರಿನ ಜೆಎಸ್‌ಎಸ್ ಪ್ರಾಥಮಿಕ ಶಾಲೆ, ನಗರ ವಿಭಾಗದಲ್ಲಿ ಮೈಸೂರಿನ ಸರಸ್ವತಿಪುರಂ ಜೆಎಸ್‌ಎಸ್ ಪ್ರಾಥಮಿಕ ಶಾಲೆ, ಚಾಮರಾಜನಗರದ ಜೆಎಸ್‌ಎಸ್ ಬಾಲಕಿಯರ ಪ್ರೌಢಶಾಲೆ, ಪಬ್ಲಿಕ್ ಶಾಲೆ ಜೂನಿಯರ್, ಸೀನಿಯರ್ ವಿಭಾಗದಲ್ಲಿ ಮೈಸೂರಿನ ಜೆ.ಪಿ.ನಗರ ಜೆಎಸ್‌ಎಸ್ ಪಬ್ಲಿಕ್ ಶಾಲೆ, ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಮೈಸೂರಿನ ಜೆಎಸ್‌ಎಸ್ ನರ್ಸಿಂಗ್ ಶಾಲೆ ಪರ್ಯಾಯ ಪಾರಿತೋಷಕ ಪಡೆದುಕೊಂಡವು. ಯೋಗಪಟು ಜೀವಿತಶ್ರೀ ಅವರನ್ನು ಸನ್ಮಾನಿಸಲಾಯಿತು.