ಸಾಗರ: ಆವಿನಹಳ್ಳಿ ಸರ್ಕಾರಿ ಶಾಲೆಯಲ್ಲಿ ರಾಷ್ಟ್ರೀಯ ಪೋಷಕ್ ಅಭಿಯಾನ

web
Published on

ಸಾಗರ: ಪೌಷ್ಟಿಕಾಂಶವುಳ್ಳ ಆಹಾರ ಸೇವನೆಯಿಂದ ಮಾತ್ರ ಸದೃಢ ಆರೋಗ್ಯ ಹೊಂದಲು ಸಾಧ್ಯ. ಮಕ್ಕಳಿಗೆ ಉತ್ತಮ ಆಹಾರ ನೀಡುವುದು ನಮ್ಮ ಜವಾಬ್ದಾರಿ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಕೆ.ಜಗನ್ನಾಥ್ ಹೇಳಿದರು. ಆವಿನಹಳ್ಳಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪೋಷಕ್ ಅಭಿಯಾನದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರ ಸದೃಢ ಯುವಜನಾಂಗ ನಿರ್ಮಿಸಲು ಹೆಚ್ಚು ಒತ್ತು ನೀಡುತ್ತಿದೆ. ಮಕ್ಕಳಿಗೆ ಮೊಟ್ಟೆ ಕೊಡುವ ಯೋಜನೆ ಅತ್ಯಂತ ಪರಿಣಾಮಕಾರಿಯಾಗಿದೆ. ಮೊಟ್ಟೆ ಸೇವನೆ ಮಾಡದ ಮಕ್ಕಳಿಗೆ ಚುಕ್ಕಿ ಮಿಠಾಯಿ ನೀಡುತ್ತಿದೆ. ಎರಡೂ ಪೌಷ್ಟಿಕಾಂಶವನ್ನು ಹೊಂದಿದೆ. ಮಕ್ಕಳು ತಮಗೆ ಬೇಕಾದುದ್ದನ್ನು ಸೇವಿಸಲು ಸರ್ಕಾರ ಅವಕಾಶ ಕಲ್ಪಿಸಿದೆ ಎಂದರು. ಮಕ್ಕಳು ಎಲ್ಲ ತರಕಾರಿ ತಿನ್ನಬೇಕು. ಉಪ್ಪು ನೀರಿನಲ್ಲಿ ತೊಳೆದು ನಂತರ ಬೇಯಿಸಿ ಸೇವಿಸಬೇಕು. ಮಕ್ಕಳ ಬೆಳವಣಿಗೆಯಲ್ಲಿ ಎಲ್ಲ ತರಕಾರಿಗಳ ಸೇವನೆಯೂ ಅಗತ್ಯವಾಗಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net