ಸಾಧಕ ಮಹಿಳೆಯರು ಸಮಾಜಕ್ಕೆ ಮಾದರಿ

IMG-20230311-WA0094
ಕಣತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಕವಿತಾ ಗಿರೀಶ್ ಮಾತನಾಡಿದರು.
Published on

ಆಲೂರು: ಜಗತ್ತಿನಲ್ಲಿ ಮಹಿಳೆ ಪುರುಷರಷ್ಟೇ ಸರಿಸಮಾನಳು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಸಹಾಯಕ ಆಯುಕ್ತೆ ಡಾ.ಕವಿತಾ ಗಿರೀಶ್ ಅಭಿಪ್ರಾಯಪಟ್ಟರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತಾಲೂಕು ಘಟಕ ವತಿಯಿಂದ ತಾಲೂಕಿನ ಪಾಳ್ಯ ಹೋಬಳಿಯ ಕಣತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಂಸಾರವನ್ನು ಸರಿಯಾಗಿ ಮುನ್ನಡೆಸುವುದರ ಜತೆಗೆ ಅನೇಕ ಸಾಧನೆಗಳನ್ನು ಮಾಡುತ್ತಿರುವ ಮಹಿಳೆಯರು ಎಲ್ಲರಿಗೂ ಆದರ್ಶ. ಜೀವನದಲ್ಲಿ ಗಂಡು-ಹೆಣ್ಣಿನ ಒಳಗೊಳ್ಳುವಿಕೆ ಇದ್ದಾಗ ಮಾತ್ರ ಯಾವುದೇ ಕಾರ್ಯ ಪರಿಪೂರ್ಣವಾಗಲು ಸಾಧ್ಯ ಎಂದರು.

ತಾಲೂಕು ಪಂಚಾಯಿತಿ ಮಾಜಿ ಸದಸ್ಯ ನಟರಾಜ್ ನಾಕಲಗೂಡು ಮಾತನಾಡಿ, ಭಾರತ್ ಸ್ಕೌಟ್ಸ್ ಮತ್ತು ಗೆಡ್ಸ್ ಶಿಸ್ತು, ಸಂಯಮ, ಸಹೋದರತ್ವ, ಸೇವಾ ಮನೋಭಾವ ಬಿತ್ತುವಲ್ಲಿ ಪಾತ್ರ ವಹಿಸುತ್ತದೆ ಎಂದರು.

ಕಾರ್ಯನಿರತ ಪತ್ರಕರ್ತರ ತಾಲೂಕು ಸಂಘದ ಅಧ್ಯಕ್ಷ ಎಚ್.ಜೆ.ಪೃಥ್ವಿರಾಮ್, ಸ್ಕೌಟ್ಸ್ ಆ್ಯಂಡ್ ಗೈಡ್ಸ್‌ನ ಜಿಲ್ಲಾ ಕಾರ್ಯದರ್ಶಿ ಸುರೇಶ್ ಗುರೂಜಿ, ಜಿಲ್ಲಾ ಉಪಾಧ್ಯಕ್ಷೆ ಜಯರಮೇಶ್, ಜಿಲ್ಲಾ ಸಹಾಯಕ ಆಯುಕ್ತ ಎಸ್.ಬಾಲಕೃಷ್ಣ, ತಾಲೂಕು ಕಾರ್ಯದರ್ಶಿ ಕೊಟ್ರೇಶ್ ಎಸ್.ಉಪ್ಪಾರ್, ಖಜಾಂಚಿ ಬಿ.ಎಸ್.ಹಿಮ, ಗೈಡ್ಸ್ ಕ್ಯಾಪ್ಟನ್‌ಗಳಾದ ರೇಷ್ಮಾ, ಮಹೇರಾಬಾನು, ಪ್ರಿಯಾಂಕಾ, ಸ್ಕೌಟ್ ಮಾಸ್ಟರ್ ಕೇಶವಮೂರ್ತಿ ಮುಂತಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net