

ಹುಣಸೂರು: 2022-23ನೇ ಶೈಕ್ಷಣಿಕ ಸಾಲಿನ ಕನ್ನಡ ಎಂಎ ವಿಭಾಗದಲ್ಲಿ 15 ಚಿನ್ನದ ಪದಕ ಮತ್ತು ಒಂದು ನಗದು ಬಹುಮಾನ ಪಡೆಯುವ ಮೂಲಕ ಸಾಧನೆಗೈದ ಹುಣಸೂರು ನಗರದ ಡಿ.ದೇವರಾಜ ಅರಸು ಕಾಲೇಜಿನ ವಿದ್ಯಾರ್ಥಿನಿ ಶ್ರೀವಿದ್ಯಾ ಅವರಿಗೆ ಶಾಸಕ ಎಚ್.ಪಿ. ಮಂಜುನಾಥ್ ಚಿನ್ನದ ಸರದ ಉಡುಗೊರೆ ನೀಡಿ ಸೋಮವಾರ ಸನ್ಮಾನಿಸಿದರು.
ವಿದ್ಯಾರ್ಥಿನಿಯ ಮನೆಗೆ ತೆರಳಿ ಸನ್ಮಾನಿಸಿ ಮಾತನಾಡಿದ ಶಾಸಕರು, 15 ವರ್ಷಗಳ ತಮ್ಮ ಅಧಿಕಾರಾವಧಿಯಲ್ಲಿ ಶಿಕ್ಷಣ, ಆರೋಗ್ಯ ಮತ್ತು ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರ ಫಲ ಇಂದು ಕಾಣಸಿಗುತ್ತಿದೆ. ಸ್ನಾತಕೋತ್ತರ ಕನ್ನಡ ವಿಭಾಗ ಪ್ರಾರಂಭವಾದ ಮೊದಲ ವರ್ಷವೇ ಶ್ರೀವಿದ್ಯಾ ಸಾಧನೆ ಮಾಡುವ ಮೂಲಕ ತಾಲೂಕಿಗೆ ಕೀರ್ತ ತಂದಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.
ತಹಸೀಲ್ದಾರ್ ಡಾ.ಎಸ್.ಯು.ಅಶೋಕ್, ಬಿಇಒ ರೇವಣ್ಣ, ಕಾಲೇಜಿನ ಪ್ರಾಂಶುಪಾಲ ಡಾ.ವೆಂಕಟೇಶಯ್ಯ, ಉಪನ್ಯಾಸಕರಾದ ಪುಟ್ಟಶೆಟ್ಟಿ, ತ್ರಿವೇಣಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗೋವಿಂದೇಗೌಡ, ಶಿಕ್ಷಕರ ಸಂಘದ ಅಧ್ಯಕ್ಷ ನರಸಿಂಹ, ಮುಖಂಡರಾದ ನಗರ ಕಾಂಗ್ರೆಸ್ ಅಧ್ಯಕ್ಷ ಕಲ್ಕುಣಿಕೆ ರಮೇಶ್, ತಾಲೂಕು ಕುರುಬರ ಸಂಘದ ಅಧ್ಯಕ್ಷ ಕುನ್ನೇಗೌಡ, ಕಾವೇರಿ ಆಸ್ಪತ್ರೆಯ ನಿರ್ದೇಶಕ ಡಾ.ಲೋಹಿತ್, ಕನಕ ನೌಕರರ ಸಂಘದ ಅಧ್ಯಕ್ಷ ಕೆಂಚೇಗೌಡ ಇತರರು ಇದ್ದರು.