ಸಾಧಕರಿಗೆ ಗೌರವಿರುವುದು ಕರ್ತವ್ಯ

16ldh1school
Published on

ಲಿಂಗದಹಳ್ಳಿ: ಹೋಬಳಿಯಲ್ಲಿ ಹೆಚ್ಚಾಗಿ ಸಣ್ಣ ರೈತರು ಹಾಗೂ ಕೂಲಿ ಕಾರ್ಮಿಕರೇ ಹೆಚ್ಚಾಗಿದ್ದು ಅಂಥವರ ಮಕ್ಕಳು ಶಿಕ್ಷಣದಲ್ಲಿ ಸಾಧನೆ ಮಾಡಿರುವುದು ವಿಶೇಷ. ಹೀಗಾಗಿ ಸಾಧಕರಿಗೆ ಗೌರವಿಸಿ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಸಮಾಜ ಸೇವಕ ಗುಳ್ಳದಮನೆ ಗೋಪಾಲಕೃಷ್ಣ ಹೇಳಿದರು.

ಲಿಂಗದಹಳ್ಳಿ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಭಾಗದ ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದು , ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೋಬಳಿಯ 110ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶೇ.80ಕ್ಕೂ ಅಧಿಕ ಅಂಕ ಪಡೆದಿರುವುದು ಶ್ಲಾಘನೀಯ. ಈ ಎಲ್ಲ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸಿ ಸ್ಮರಣಿಕೆಗಳನ್ನು ನೀಡಿ ಪುರಸ್ಕರಿಸಲಾಗುತ್ತಿದೆ ಎಂದು ಹೇಳಿದರು.

ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಬಿ.ಆರ್.ರವಿ ಮಾತನಾಡಿ, ಶಾಸಕ ಜಿ.ಎಚ್.ಶ್ರೀನಿವಾಸ್ ಅವರು ಲಿಂಗದಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಅಗತ್ಯವಾಗಿದ್ದ 2 ಶೌಚಗೃಹ, ಹೆಚ್ಚುವರಿ ಕೊಠಡಿ ಮತ್ತು ಸಿಂಥೆೆಟಿಕ್ ಕ್ರೀಡಾಂಗಣ, ರಂಗಮಂದಿರ ಸೇರಿದಂತೆ ಅನೇಕ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಶೈಕ್ಷಣಿಕ ಕ್ಷೇತ್ರದ ಪ್ರಗತಿಗೆ ವಿಶೇಷ ಕೊಡುಗೆ ನೀಡಿದ್ದಾರೆ ಎಂದರು.

ಶಾಸಕ ಜಿ.ಎಚ್.ಶ್ರೀನಿವಾಸ್, ಗುಳ್ಳದಮನೆ ಗೋಪಾಲಕೃಷ್ಣ ಅವರು ಎಲ್ಲರಿಗೂ ಮಾದರಿ. ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳಿಗೆ ಶಾಲಾ ಪರಿಕರಗಳನ್ನು ಒದಗಿಸುತ್ತಿದ್ದಾರೆ. ನಾನು ಶಾಸಕನಾದ ನಂತರ ತರೀಕೆರೆ, ಬಾವಿಕೆರೆ, ಲಿಂಗದಹಳ್ಳಿ ಈ ಮೂರು ಪ್ರೌಢಶಾಲೆಗಳನ್ನು ಕೆಪಿಎಸ್ ಶಾಲೆಗಳಾಗಿ ಆಯ್ಕೆ ಮಾಡಿದ್ದು ಇದರಿಂದ ಬರುವ ಅನುದಾನದಲ್ಲಿ ಲಿಂಗದಹಳ್ಳಿ ಪ್ರೌಢಶಾಲೆಗೆ ಹೆಚ್ಚುವರಿ ಕೊಠಡಿ, ಶಿಕ್ಷಕರು ಸೇರಿದಂತೆ ಅನೇಕ ಸೌಲಭ್ಯಗಳು ಸಿಗಲಿವೆ ಎಂದು ಹೇಳಿದರು.

ಬಿಇಒ ರುದ್ರಪ್ಪ, ನಿವೃತ್ತ ಬಿಇಒ ರಾಜ್‌ಕುಮಾರ್, ತಾಪಂ ಕೆಡಿಪಿ ಸದಸ್ಯೆ ರಚನಾ ಶ್ರೀನಿವಾಸ್, ಪ್ರೌಢಶಾಲಾ ಶಿಕ್ಷಕರಾದ ಬಿ.ಸಿ.ಚಂದ್ರಶೇಖರ್, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ತಮ್ಮಯ್ಯ, ನಾಗೇಶಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net