ಸಾಮಾಜಿಕ ನ್ಯಾಯ ಕಲ್ಪಿಸಿದ ನಾಯಕ ಡಾ.ಅಂಬೇಡ್ಕರ್

xr:d:DAFrCSyoYmU:395,j:2549462321220167348,t:24041509
ಕೂಡ್ಲಿಗಿ ತಾಲೂಕು ಕಚೇರಿಯಲ್ಲಿ ಏರ್ಪಡಿಸಿದ್ದ ಡಾ.ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಜಯಂತಿ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ರಾಜು ಪಿರಂಗಿ ಪುಷ್ಪ ನಮನ ಸಲ್ಲಿಸಿದರು. ಸಹಾಯಕ ಚುನಾವಣಾಧಿಕಾರಿ ಡಾ.ಎಚ್.ಎನ್.ರಘು, ತಾಪಂ ಇಒ ವೈ.ರವಿಕುಮಾರ್, ಪಪಂ ಮುಖ್ಯಾಧಿಕಾರಿ ಫಿರೋಜ್ ಖಾನ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪಿ.ಶಿವರಾಜ್ ಇತರರಿದ್ದರು.
Published on

ಕೂಡ್ಲಿಗಿ: ದೇಶಕ್ಕಾಗಿ ಶ್ರೇಷ್ಠ ಸಂವಿಧಾನ ಬರೆದು ಇಡೀ ವಿಶ್ವದ ಗಮನ ಸೆಳೆದವರು ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಡಾ.ಅಂಬೇಡ್ಕರ್ ಸಂಘದ ತಾಲೂಕು ಅಧ್ಯಕ್ಷ ಗುಣಸಾಗರದ ಕೃಷ್ಣಪ್ಪ ಹೇಳಿದರು.

ಪಟ್ಟಣದ ತಾಲೂಕು ಕಚೇರಿಯಲ್ಲಿ ತಾಲೂಕು ಆಡಳಿತ, ತಾಲೂಕು ದಲಿತ ಪರ ಸಂಘಟನೆಗಳು ಏರ್ಪಡಿಸಿದ್ದ ಡಾ. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಜಯಂತಿ ಕಾರ್ಯಕ್ರಮದಲ್ಲಿಮಾತನಾಡಿದರು. ಸ್ವಾತಂತ್ರ್ಯ ನಂತರ ದೇಶದ ಜನಸಂಖ್ಯೆಗೆ ಅನುಗುಣವಾಗಿ ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಗಬೇಕು ಎನ್ನುವ ಆಶಯ ಹೊಂದಿ ಸಂವಿಧಾನ ರಚಿಸಿದರು. ಸರ್ವ ಜನಾಂಗಕ್ಕೂ ಸಮಾನತೆ ತೋರಿದ ಮಹಾನ್ ಮಾನವತಾವಾದಿಯ ತತ್ವಾದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದರು.

ಬಾಬು ಜಗಜೀವನರಾಮ್ ಸಂಘದ ತಾಲೂಕು ಅಧ್ಯಕ್ಷ ಸಾಸಲವಾಡ ಶಿವಣ್ಣ, ಹಿರೇಕುಂಬಳಗುಂಟೆ ಉಮೇಶ್, ಪೌರ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಪ್ರಭಾಕರ, ಎಸ್.ದುರುಗೇಶ್, ಡಿ.ಎಚ್.ದುರುಗೇಶ್ ಮಾತನಾಡಿದರು. ತಹಸೀಲ್ದಾರ್ ರಾಜು ಪಿರಂಗಿ, ಸಹಾಯಕ ಚುನಾವಣಾಧಿಕಾರಿ ಡಾ.ಎಚ್.ಎನ್.ರಘು, ತಾಪಂ ಇಒ ವೈ.ರವಿಕುಮಾರ್, ಪಪಂ ಮುಖ್ಯಾಧಿಕಾರಿ ಫಿರೋಜ್ ಖಾನ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪಿ.ಶಿವರಾಜ್, ಪಪಂ ಸದಸ್ಯ ಕಾವಲಿ ಶಿವಪ್ಪನಾಯಕ, ಬಂಡೆ ರಾಘವೇಂದ್ರ, ಪರಶುರಾಮ, ಮಹೇಶ್, ಸಿದ್ದಪ್ಪ, ದುರುಗಪ್ಪ, ಸಮಾಜ ಕಲ್ಯಾಣಾಧಿಕಾರಿ ಜಗದೀಶ್ ದಿಡಗೂರ್, ಶಿವರಾಜ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net