ಸಾರ್ವಜನಿಕ ಆಸ್ಪತ್ರೆ ಹಳೆಯ ಕೊಠಡಿ ತೆರವು

16 SARAG 01
Published on

ಸರಗೂರು: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿದ್ದ ಹಳೆಯ ಕೊಠಡಿಗಳನ್ನು ಬುಧವಾರ ತೆರವುಗೊಳಿಸುವ ಕಾರ್ಯಾಚರಣೆ ನಡೆಯಿತು. ಕಾಮಗಾರಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಟಿ . ರವಿಕುಮಾರ್, ಹಳೆಯ ಕಟ್ಟಡದ ಛಾವಣಿ ಶಿಥಿಲಗೊಂಡಿತ್ತು. ಮಳೆ ಬಂದಾಗ ಸೋರುತ್ತಿತ್ತು. ಹಾಗಾಗಿ ಅದನ್ನು ತೆರವುಗೊಳಿಸಲಾಗಿದೆ. ಇದೇ ಸ್ಥಳದಲ್ಲಿ 16 ಲಕ್ಷ ರೂ. ವೆಚ್ಚದಲ್ಲಿ 6 ಹಾಸಿಗೆಯ ಐಸೋಲೇಶನ್ ವಾರ್ಡ್ ನಿರ್ಮಾಣ ಮಾಡಲಾಗುತ್ತದೆ ಎಂದು ವಿವರಿಸಿದರು. ಆಸ್ಪತ್ರೆ ವೈದ್ಯಾಧಿಕಾರಿ ಡಾ ಸೋಮಣ್ಣ, ಡಾ. ಪಾರ್ಥ ಸಾರಥಿ ಮತ್ತು ಸಿಬ್ಬಂದಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net