ಸಾರ್ವಜನಿಕ ಆಸ್ಪತ್ರೆ ಹಳೆಯ ಕೊಠಡಿ ತೆರವು

16 SARAG 01
ಸರಗೂರಿನ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿದ್ದ ಹಳೆಯ ಕೊಠಡಿಗಳನ್ನು ಬುಧವಾರ ತೆರವುಗೊಳಿಸಲಾಯಿತು. ತಾಲೂಕು ಆರೋಗ್ಯಾಧಿಕಾರಿ ರವಿಕುಮಾರ್, ವೈದ್ಯಾಧಿಕಾರಿ ಡಾ ಸೋಮಣ್ಣ, ಡಾ. ಪಾರ್ಥ ಸಾರಥಿ ಹಾಜರಿದ್ದರು.
Published on

ಸರಗೂರು: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿದ್ದ ಹಳೆಯ ಕೊಠಡಿಗಳನ್ನು ಬುಧವಾರ ತೆರವುಗೊಳಿಸುವ ಕಾರ್ಯಾಚರಣೆ ನಡೆಯಿತು.

ಕಾಮಗಾರಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಟಿ.ರವಿಕುಮಾರ್, ಹಳೆಯ ಕಟ್ಟಡದ ಛಾವಣಿ ಶಿಥಿಲಗೊಂಡಿತ್ತು. ಮಳೆ ಬಂದಾಗ ಸೋರುತಿತ್ತು. ಹಾಗಾಗಿ ಅದನ್ನು ತೆರವುಗೊಳಿಸಲಾಗಿದೆ.

ಇದೇ ಸ್ಥಳದಲ್ಲಿ 16 ಲಕ್ಷ ರೂ. ವೆಚ್ಚದಲ್ಲಿ 6 ಹಾಸಿಗೆಯ ಐಸೋಲೇಶನ್ ವಾರ್ಡ್ ನಿರ್ಮಾಣ ಮಾಡಲಾಗುತ್ತದೆ ಎಂದು ವಿವರಿಸಿದರು. ಆಸ್ಪತ್ರೆ ವೈದ್ಯಾಧಿಕಾರಿ ಡಾ ಸೋಮಣ್ಣ, ಡಾ. ಪಾರ್ಥಸಾರಥಿ ಮತ್ತು ಸಿಬ್ಬಂದಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net