ಸಾರ್ವಜನಿಕ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೇವೆ

18KDR2 dayalisis
ಕಡೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಘಟಕದ ನೆಪ್ರೋಪ್ಲಸ್ ೌಂಡೇಷನ್‌ನ 15ನೇ ವಾರ್ಷಿಕೋತ್ಸವ ಆಚರಿಸಲಾಯಿತು. ವೈದ್ಯಾಧಿಕಾರಿ ಡಾ. ಉಮೇಶ್, ಕೆ.ಆರ್.ಸುರೇಶ್, ಪವನ್, ಮೋಹನ್, ಗಿರೀಶ್, ಅರುಣ್ ಇತರರಿದ್ದರು.
Published on

ಕಡೂರು: ಮೂತ್ರಪಿಂಡ ವೈಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಸುಸಜ್ಜಿತ ಡಯಾಲಿಸಿಸ್ ಸೇವೆಯನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಒದಗಿಸಲಾಗುತ್ತಿದೆ ಎಂದು ಆಸ್ಪತ್ರೆ ವೈದ್ಯಾಧಿಕಾರಿ ಡಾ. ಉಮೇಶ್ ತಿಳಿಸಿದರು.

ಸಾರ್ವಜನಿಕ ಆಸ್ಪತ್ರೆಯ ಡಯಾಲಿಸಿಸ್ ಘಟಕದಲ್ಲಿ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಡಯಾಲಿಸಿಸ್ ಸೇವೆ ನೀಡುತ್ತಿರುವ ನೆಪ್ರ್ಲೋಸ್ ೌಂಡೇಷನ್‌ನ 15ನೇ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು. ಆಸ್ಪತ್ರೆಯ ಡಯಾಲಿಸಿಸ್ ಘಟಕದಲ್ಲಿ ಪ್ರತಿನಿತ್ಯ 24 ರೋಗಿಗಳಿಗೆ ಉಚಿತವಾಗಿ ಡಯಾಲಿಸಿಸ್ ಸೇವೆ ನೀಡಲಾಗುತ್ತಿದೆ. ಯಾವುದೇ ಲೋಪವಿಲ್ಲದೆ ಸಮರ್ಪಕವಾಗಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದರು.

ಪ್ರಯೋಗಶಾಲೆಯ ತಾಂತ್ರಿಕ ಅಧಿಕಾರಿ ಕೆ.ಆರ್.ಸುರೇಶ್, ಡಯಾಲಿಸಿಸ್ ಘಟಕದ ಸಿಬ್ಬಂದಿ ಇ.ಮೋಹನ್, ಪವನ್, ಗಿರೀಶ್, ರೇಖಾ, ಅರುಣ್, ರಂಜಿತಾ ಹಾಗೂ ಆಸ್ಪತ್ರೆಯ ದಾದಿಯರು, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net