

ನಗರದಲ್ಲಿ ಭಾನುವಾರ ರಾತ್ರಿ ತಂಗಿದ್ದ ಸಿಎಂ ಸಿದ್ದರಾಮಯ್ಯ ಸೋಮವಾರ ಬೆಳಗ್ಗೆ ತಮ್ಮ ನಿವಾಸದ ಬಳಿ ತಮ್ಮನ್ನು ನೋಡಲು ನೆರೆದಿದ್ದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಜಿಲ್ಲೆಯ ಮೂಲೆ ಮೂಲೆಗಳಿಂದ ಆಗಮಿಸಿದ್ದ ನೂರಾರು ಮಂದಿ ತಮ್ಮ ವೈಯಕ್ತಿಕ ಸಮಸ್ಯೆ, ಉದ್ಯೋಗ, ಶಿಕ್ಷಣ ಸೇರಿದಂತೆ ಹತ್ತಾರು ಬೇಡಿಕೆಗಳ ಪಟ್ಟಿಯನ್ನು ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ಎಲ್ಲರ ಮನವಿ ಆಲಿಸಿದ ಸಿಎಂ ಸಿದ್ದರಾಮಯ್ಯ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದರು.