

ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಿದ ಪ್ರಕರಣ ಸಂಬಂಧ ಸಾವಿರಕ್ಕೂ ಅಧಿಕ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಪ್ರಥಮ ವರ್ತಮಾನ ವರದಿ ಪ್ರಕಾರ, ಗಲಭೆಯಲ್ಲಿ ಇದ್ದವರು ಒಂದು ಸಾವಿರಕ್ಕೂ ಹೆಚ್ಚು ಜನ ಎಂದಿರುವ ಪೊಲೀಸರು, ಮನಬಂದಂತೆ ಕಲ್ಲು ತೂರಾಟ ಮಾಡಿದರು. ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದರು. ಈ ವೇಳೆ ಹಲವಾರು ಪೊಲೀಸರಿಗೆ ಹಾಗೂ ಸಾರ್ವಜನಿಕರಿಗೂ ಗಾಯ ಆಯಿತು. ಡಿಸಿಪಿ-2 ಸೇರಿದಂತೆ ಅನೇಕ ಪೊಲೀಸ್ ಅಧಿಕಾರಿಗಳ ವಾಹನಗಳ ಮೇಲೆ ಕಲ್ಲು ತೂರಾಟ ನಡೆಯಿತು. ಬಳಿಕ ಹೆಚ್ಚಿನ ಪೊಲೀಸ್ ಸಿಬ್ಬಂದಿ ಕರೆಸಿ ಮುಸ್ಲಿಂ ಯುವಕರ ಗುಂಪನ್ನು ಚದುರಿಸಲಾಯಿತು. ಅಧಿಕಾರಿಗಳ ಮೇಲೆ ಹಲ್ಲೆ, ನಿಂದನೆ, ಸರ್ಕಾರಿ ವಾಹನಗಳ ಜಖಂ ಸೇರಿದಂತೆ ಆಸ್ತಿಪಾಸ್ತಿ ಹಾನಿ, ಹಾನಿಯುಂಟು ಮಾಡಿದ ಮುಸ್ಲಿಂ ಯುವಕರ ಗುಂಪಿನ ಮೇಲೆ ಕ್ರಮಕ್ಕೆ ಕೋರಿ ಉದಯಗಿರಿ ಠಾಣೆಯ ಪಿಎಸ್‌ಐ ಸುನಿಲ್ ದೂರು ದಾಖಲಿಸಿದ್ದಾರೆ.