ಸಿ.ಎಂ. ಕಪ್ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

48
Published on

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ‘ಸಿ.ಎಂ. ಕಪ್’ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಸೋಮವಾರ ವಿಧ್ಯುಕ್ತ ಚಾಲನೆ ದೊರೆಯಿತು.

ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವರ್ಣರಂಜಿತ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಜತೆಗೆ ಕ್ರೀಡಾಂಗಣದ ನಾನಾ ಅಭಿವೃದ್ಧಿ ಕಾರ್ಯಗಳನ್ನು ಲೋಕಾರ್ಪಣೆ ಮಾಡಿದರು.

ಹೆಚ್ಚು ತೂಕದ ಕಾರಣದಿಂದಾಗಿ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಅರ್ನಹಗೊಂಡು ಪದಕ ವಂಚಿತರಾಗಿದ್ದ ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕ್ರೀಡಾಪಟುಗಳ ಸಂಭ್ರಮ ಹೆಚ್ಚಿಸಿದರು. ರಾಜ್ಯ ಸರ್ಕಾರದ ಪರವಾಗಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net