ಚಾಮರಾಜನಗರ: ಭಾರತೀಯ ಜನತಾ ಪಾರ್ಟಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಸಿ.ಬಿ.ಸೂರ್ಯ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಜಿಲ್ಲಾಧ್ಯಕ್ಷ ಆರ್.ಸುಂದರ್ ಜೂ.3ರಂದು ಈ ಸ್ಥಾನಕ್ಕೆ ನೇಮಕ ಮಾಡಿ ನಗರದ ಬಿಜೆಪಿ ಕಚೇರಿಯಲ್ಲಿ ಆದೇಶ ಪತ್ರ ವಿತರಿಸಿ ಸಂಘಟನೆ ಮತ್ತು ಪಕ್ಷದ ಬಲವರ್ಧನೆಗೆ ತೊಡಗಿಸಿಕೊಳ್ಳಬೇಕೆಂದು ತಿಳಿಸಿದ್ದಾರೆ.
ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿರುವ ಸಿ.ಬಿ. ಸೂರ್ಯ ಕುಮಾರ್ ಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಲ್ಲಿ ಕೆಲಸ ಮಾಡಿದ ಅನುಭವವಿದೆ.