

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆ.21ಮತ್ತು 22ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 21ರಂದು 4.25ಕ್ಕೆ ಮೆಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ತಮ್ಮ ನಿವಾಸದಲ್ಲಿ ವಾಸ್ತವ್ಯ ಹೂಡುವರು. 22ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 12.30ಕ್ಕೆ ಕುಪ್ಪಣ್ಣ ಪಾರ್ಕ್‌ನಲ್ಲಿ ಫಲಪುಷ್ಪ ಪ್ರದರ್ಶನ, ಸಂಜೆ 4ಕ್ಕೆ ಶ್ರೀ ದೇವರಾಜ ಅರಸು ವಿವಿಧೋದ್ದೇಶ ಕ್ರಿಡಾಂಗಣದಲ್ಲಿ ಕುಸ್ತಿ ಪಂದ್ಯಾವಳಿ ಉದ್ಘಾಟಿಸುವರು.
ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 5.30ಕ್ಕೆ ಚಾಮುಂಡಿ ವಿಹಾರ ಕ್ರಿಡಾಂಗಣದಲ್ಲಿ ರಾಜ್ಯ ದಸರಾ ಸಿಎಂ ಕಪ್ ಕ್ರಿಡಾಕೂಟ, ಸಂಜೆ 7.30ಕ್ಕೆ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ವಸ್ತು ಪ್ರದರ್ಶನ ಉದ್ಘಾಟನೆ ಮಾಡುವರು. ರಾತ್ರಿ 9ಕ್ಕೆ ಬೆಂಗಳೂರಿಗೆ ಮರಳುವರು.