ಸಿಎಂ.ಡಿಸಿಎA ವಿರುದ್ಧ ಅವಹೇಳನ/ ಕಾಂಗ್ರೆಸ್ ನಿಂದ ಎಸ್ಪಿಗೆ ದೂರು,

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ಸಿಎಂ, ಡಿಸಿಎಂ ಸೇರಿದಂತೆ ಕೆಲ ಸಚಿವರನ್ನು ಅಸಭ್ಯ ಪದಗಳ ಮೂಲಕ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿರುವ ಚಿಕ್ಕಬಳ್ಳಾಪುರ ಮೂಲದ ಮೋಹಿತ್ ನರಸಿಂಹಮೂರ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಎಸ್ಪಿ ಬಿ ನಿಖಿಲ್ ಅವರಿಗೆ ದೂರು ಸಲ್ಲಿಸಿದರು.

ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ದಿನಗಳಿಂದ ವಿನಾಕಾರಣ ಸಿಎಂ. ಡಿಸಿಎಂ ಹಾಗು ದಲಿತ ಸಚಿವರು ಸೇರಿದಂತೆ ಪಕ್ಷದ ನಾಯಕರು ಮುಖಂಡರ ವಿರುದ್ದ ಅಸಭ್ಯವಾಗಿ ವರ್ತಿಸುವವರ ಸಂಖ್ಯೆ ಜಾಸ್ತಿಯಾಗಿದೆ. ಇತ್ತೀಚೆಗೆ ಮೋಹಿತ್ ನರಸಿಂಹಮೂರ್ತಿಯ ಉದ್ದಟನವು ಜಾಸ್ತಿಯಾಗಿದ್ದು ಕೂಡಲೇ ಕ್ರಮ ವಹಿಸುವಂತೆ ಮನವಿ ಮಾಡಿದರು.

ರಾಜ್ಯದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯ ವಿರುದ್ದವೇ ಹೀನಾಯವಾಗಿ ಏಕವಚನದಲ್ಲಿ ಸಂಭೋದಿಸಿ ಬೈಯ್ಯುಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋಗಳನ್ನು ಹರಿದು ಬಿಟ್ಟು ತನ್ನ ನೀಚ ಸಂಸ್ಕೃತಿಯನ್ನು ಪ್ರದರ್ಶನ ಮಾಡಿದ್ದಾನೆ. ಸಮಾಜದಲ್ಲಿ ಈ ಪ್ರಕರಣದಿಂದ ಶಾಂತಿ ಭಂಗವಾಗುವ ಸಾಧ್ಯತೆಗಳಿದ್ದು ಕಾಂಗ್ರೆಸ್ ಪಕ್ಷದಿಂದ ದೊಡ್ಡ ಪ್ರಮಾಣದ ಪ್ರತಿಭಟನೆ ನಡೆಯುವುದಕ್ಕೂ ಮೊದಲೇ ಈತನ ಮೇಲೆ ಸೂಕ್ತ ಕ್ರಮಕೈಗೊಂಡು ಬಂಧಿಸಿ ಶಿಕ್ಷೆಗೆ ಒಳಪಡಿಸಿ ಗಡಿಪಾರು ಮಾಡಬೇಕು. ಇನ್ನು ಮುಂದೆ ಇಂತಹ ಕಿಡಿಗೇಡಿಗಳು ಸಾಮಾಜಿಕ ಜಾಲತಾಣವನ್ನು ದುರುಪಯೋಗ ಪಡಿಸಿಕೊಳ್ಳಲು ಅವಕಾಶ ಮಾಡಿಕೊಡಬಾರದು ಈ ದಿಕ್ಕಿನಲ್ಲಿ ತಾವುಗಳು ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಎಸ್ಪಿ ಬಿ ನಿಖಿಲ್ ಈ ಘಟನೆಗೆ ಸಂಬAಧಿಸಿದAತೆ ಪರಿಶೀಲನೆ ಮಾಡಿ ಸಂಬAಧಿಸಿದ ಜಿಲ್ಲೆಯ ಎಸ್ಪಿ ಗಮನಕ್ಕೆ ತರಲಾಗುತ್ತದೆ ಎಂದು ತಿಳಿಸಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿ.ಲಕ್ಷ್ಮೀನಾರಾಯಣ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷ ಕೆ.ಜಯದೇವ್, ಪದವೀಧರ ಘಟಕದ ಅಧ್ಯಕ್ಷ ಸುಧೀರ್, ಕಾರ್ಮಿಕ ಘಟಕದ ಹೊನ್ನೇನಹಳ್ಳಿ ಯಲ್ಲಪ್ಪ, ಒಬಿಸಿ ಘಟಕದ ಮಂಜುನಾಥ್, ಮುಖಂಡರಾದ ವೆಂಕಟಪತಿಯಪ್ಪ, ನಾಗರಾಜಗೌಡ, ಪರ್ವೇಜ್, ರಾಮಯ್ಯ, ಹರೀಷ್, ಎನ್.ಟಿ.ಆರ್ ಮಂಜುನಾಥ್ ಮುಂತಾದವರು ಇದ್ದರು.

ಚಿತ್ರ ಕೆ.ಎಲ್.ಆರ್. ೦೧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಎಸ್ಪಿ ಬಿ ನಿಖಿಲ್ ಅವರಿಗೆ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿ.ಲಕ್ಷ್ಮೀನಾರಾಯಣ, ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಮುಂತಾದವರು ಮನವಿ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net