

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಡ ಹಬ್ಬ ಮೈಸೂರು ದಸರಾಗೆ ಅಧಿಕೃತವಾಗಿ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಲಾಯಿತು.
ಗುರುವಾರ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಮತ್ತು ಮೈಸೂರು ಜಿಲ್ಲಾಡಳಿತ ದಸರಾದ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿದರು. ಆಹ್ವಾನ ಪತ್ರಿಕೆ ಮೇಲೆ ಕಣ್ಣಾಡಿಸಿದ ಸಿದ್ದರಾಮಯ್ಯ, ಯಾವುದೇ ಗೊಂದಲ, ಗಲಾಟೆ ಇಲ್ಲದೆ ಸುಸೂತ್ರವಾಗಿ ದಸರಾ ನಡೆಸಲು ಎಲ್ಲ ರೀತಿಯ ತಯಾರಿ ನಡೆಸಬೇಕು. ಸಣ್ಣಪುಟ್ಟ ಗೊಂದಲಕ್ಕೂ ಅವಕಾಶ ನೀಡಬಾರದು. ಹೊರಗಡೆಯಿಂದ ಬರುವ ಪ್ರವಾಸಿಗರಿಗೆ ಸಕಲ ವ್ಯವಸ್ಥೆ ಮಾಡಬೇಕು. ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಮಾಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮತ್ತು ಜಿಲ್ಲಾಡಳಿತಕ್ಕೆ ಸಿದ್ದರಾಮಯ್ಯ ಕಿವಿ ಮಾತು ಹೇಳಿದರು. ಈ ವೇಳೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.