ಸಿಎಂ ಬೆಳಗಾವಿ ಪ್ರವಾಸ ಫಿಕ್ಸ್

Published on

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ನನೆಗುದಿ ಬೇಗುದಿ, ನಿಗಮ-ಮಂಡಳಿಗಳಿಗೆ ನೇಮಕದ ಅಸಮಾಧಾನ, ವೀರಶೈವ-ಲಿಂಗಾಯತರಿಗೆ ಮೀಸಲು ಮಸೂದೆ ಮುಂದೂಡಿಕೆ ಇನ್ನಿತರ ಬೆಳವಣಿಗೆಗಳ ಮಧ್ಯೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 2 ದಿನಗಳ ಬೆಳಗಾವಿ ಪ್ರವಾಸ ನಿಗದಿಯಾಗಿದೆ.
ಬೆಳಗಾವಿಯಲ್ಲಿ ಡಿ.4ರಂದು ನಡೆಯಲಿರುವ ಬಿಜೆಪಿ ಕೋರ್ ಕಮಿಟಿ ಸಭೆ ಹಾಗೂ 5ರಂದು ಏರ್ಪಡಿಸಿರುವ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಶುಕ್ರವಾರ ಮಧ್ಯಾಹ್ನ 2.15ಕ್ಕೆ ಇಂಡಿಯನ್ ಏರ್ ಲೈನ್ಸ್ ವಿಮಾನದಲ್ಲಿ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 3.40ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತಲುಪುವರು. ರಾತ್ರಿ 7.30ಕ್ಕೆ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿದ ನಂತರ ಬೆಳಗಾವಿಯಲ್ಲಿ ವಾಸ್ತವ್ಯ ಹೂಡುವರು.
ಡಿ.5ರ ಬೆಳಗ್ಗೆ 10ಕ್ಕೆ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಅದೇ ದಿನ ರಾತ್ರಿ 7.30ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಇಂಡಿಯನ್ ಏರ್ ಲೈನ್ಸ್ ವಿಮಾನದಲ್ಲಿ ಬೆಂಗಳೂರಿಗೆ ಮರಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net