ಸಿಡಿಲು ಬಡಿದು ರೈತ ಸಾವು

IMG_20230522_105948
Published on

ಬೈಲಕುಪ್ಪೆ: ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ಭಾನುವಾರ ಸಂಜೆ ಸಿಡಿಲು ಬಡಿದು ರೈತ ಸಾವಿಗೀಡಾಗಿದ್ದಾರೆ.


ಆವರ್ತಿ ಗ್ರಾಮದ ಅಪ್ಪಸ್ವಾಮಿ ಪುತ್ರ ಎ.ಎ.ಲೋಕೇಶ್ (55) ಮೃತಪಟ್ಟವರು. ಮನೆ ಹಿಂಭಾಗದ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಅವರು, ಜೋರು ಮಳೆ ಬಂದ ಹಿನ್ನೆಲೆಯಲ್ಲಿ ಮರದಡಿ ಆಶಯ ಪಡೆದಿದ್ದಾರೆ. ಈ ವೇಳೆ ಸಿಡಿಲು ಬಡಿದು ಅಸುನೀಗಿದ್ದಾರೆ. ಬೈಲಕುಪ್ಪೆ ಪೊಲೀಸ್ ಠಾಣಾಧಿಕಾರಿ ಬಸವರಾಜ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದರು. ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಒಪ್ಪಿಸಲಾಯಿತು. ಇವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಅವರ ಜಮೀನಿನಲ್ಲಿ ಸೋಮವಾರ ಅಂತ್ಯಕ್ರಿಯೆ ನಡೆಯಿತು.


ಆವರ್ತಿ ಗ್ರಾಮದ ಅಪ್ಪಸ್ವಾಮಿ ಪುತ್ರ ಎ.ಎ.ಲೋಕೇಶ್ (55) ಮೃತಪಟ್ಟವರು. ಮನೆ ಹಿಂಭಾಗದ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಅವರು, ಜೋರು ಮಳೆ ಬಂದ ಹಿನ್ನೆಲೆಯಲ್ಲಿ ಮರದಡಿ ಆಶಯ ಪಡೆದಿದ್ದಾರೆ. ಈ ವೇಳೆ ಸಿಡಿಲು ಬಡಿದು ಅಸುನೀಗಿದ್ದಾರೆ. ಬೈಲಕುಪ್ಪೆ ಪೊಲೀಸ್ ಠಾಣಾಧಿಕಾರಿ ಬಸವರಾಜ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದರು. ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಒಪ್ಪಿಸಲಾಯಿತು.

ಇವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಅವರ ಜಮೀನಿನಲ್ಲಿ ಸೋಮವಾರ ಅಂತ್ಯಕ್ರಿಯೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net