ಸಿದ್ದರಾಮಯ್ಯ ಅವರ ಗೂಂಡಾ ಭಾಗ್ಯ

R Ashok
Published on

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚಾಗಿರುವ ಸಂಬಂಧ ಪ್ರತಿಕ್ರಿಯಿಸಿದ ಆರ್.ಅಶೋಕ್  ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಧೆ ಸಂಪೂರ್ಣ ಕುಸಿದಿದೆ. ರಾಜ್ಯ ಸರ್ಕಾರ ದಿವಾಳಿಯಾಗಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲ ನೀಡುತ್ತಿಲ್ಲ. ಹೀಗಾಗಿ ಜನರು ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಬಂದ ಮೇಲೆ ಗುಂಡಾಗಳಿಗೂ ಕೆಲಸ ಸಿಕ್ಕಿದೆ. ಅವರು ಅವರ ಕೆಲಸವನ್ನು ನಿಷ್ಠೆಯಿಂದ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರು ಆರನೇ ಭಾಗ್ಯವಾಗಿ ಗೂಂಡಾ ಭಾಗ್ಯ ಕೂಡ ಕೊಟ್ಟಿದ್ದಾರೆ ಎಂದು ಟೀಕಿಸಿದರು.

ಬಿಜೆಪಿಯಲ್ಲಿನ ಬಣ ಬಡಿದಾಟ ವಿಚಾರವಾಗಿ ಪ್ರತಿಕ್ರಿಸಿದ ಅವರು, ಶ್ರೀರಾಮುಲು ಹಾಗೂ ಜನಾರ್ಧನರೆಡ್ಡಿ ಜೊತೆ ಮಾತನಾಡಿದ್ದೇನೆ. ಅವರಿಬ್ಬರೂ ಒಳ್ಳೆಯ ಸ್ನೇಹಿತರು. ಸಣ್ಣಪುಟ್ಟ ಗೊಂದಲದಿಂದ ಈ ರೀತಿ ಆಗಿದೆ. ಇಬ್ಬರೂ ಕೂಡ ಇದನ್ನು ಇಲ್ಲಿಗೇ ನಿಲ್ಲಿಸುತ್ತಾರೆ. ಶೀಘ್ರದಲ್ಲೇ ಎಲ್ಲ ಕೂಡ ಸರಿಯಾಗುತ್ತದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net