ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ ಜಿಟಿಡಿ!

15
Published on

ಶಾಸಕ ಜಿ.ಟಿ. ದೇವೇಗೌಡ ಇಂದಿರಾ ಕ್ಯಾಂಟಿನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದಾರೆ.

ಬಡಜನರಿಗೆ ಐದು ಕೆಜಿ ಅಕ್ಕಿ ಕೊಟ್ಟ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ. ಶಾಸಕ, ಮಂತ್ರಿ, ಡಿಸಿಎಂ, ಸಿಎಂ ಹೀಗೆ 47 ವರ್ಷಗಳ ಕಾಲ ಆಡಳಿತ ಮಾಡಿರುವ ಸಿದ್ದರಾಮಯ್ಯ ಅವರು ಇಡೀ ದೇಶದಲ್ಲಿ ದಾಖಲೆ ಮಾಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಜನರು ಸಿದ್ದರಾಮಯ್ಯ ಮಾತು ಕೇಳುತ್ತಾರೆ. ನಿಮ್ಮ ಅವಧಿಯಲ್ಲಿಯೇ ಮೈಸೂರನ್ನು ಗ್ರೇಟರ್ ಮೈಸೂರನ್ನಾಗಿ ಮಾಡಿ ನಿಮ್ಮ ಕೀರ್ತಿ ಹೆಚ್ಚಿಸಿಕೊಳ್ಳಿ ಎಂದು ಹೇಳುವ ಮೂಲಕ ತಮ್ಮ ಭಾಷಣದ ಉದ್ದಕ್ಕೂ ಸಿದ್ದರಾಮಯ್ಯ ಆಡಳಿತವನ್ನು ಹಾಡಿ ಹೊಗಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪೌರಾಡಳಿತ ಸಚಿವ ರಹೀಂ ಖಾನ್, ಶಾಸಕ ತನ್ವೀರ್ ಸೇಠ್, ಕೆ.ಹರೀಶ್‌ಗೌಡ, ರವಿಶಂಕರ್, ವಿಧಾನಸಭಾ ಪರಿಷತ್ ಸದಸ್ಯ ಯತ್ರೀಂದ್ರ ಸಿದ್ದರಾಮಯ್ಯ, ಡಾ.ಡಿ.ತಿಮ್ಮಯ್ಯ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಎಸ್.ಯುಕೇಶ್ ಕುಮಾರ್ ಸೇರಿದಂತೆ ಅನೇಕರು ಇದ್ದರು.

ಹಿನಕಲ್ ಗ್ರಾಮದಲ್ಲಿ ಶನಿವಾರ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ ಕ್ಯಾಂಟಿನ್‌ನಲ್ಲಿ ಬೆಳಗಿನ ತಿಂಡಿ ಸವಿದರು. ಕ್ಯಾಂಟಿನ್‌ನಲ್ಲಿ ತಯಾರಿಸಿದ್ದ ಬಿಸಿಬೇಳೆ ಬಾತ್, ಕೇಸರಿ ಬಾತ್, ಚಪಾತಿಯನ್ನು ಸೇವಿಸಿದರು. ಸಿದ್ದರಾಮಯ್ಯ ಜತೆಗೆ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಶಾಸಕ ಜಿ.ಟಿ. ದೇವೇಗೌಡ, ತನ್ವೀರ್ ಸೇಠ್ ಸೇರಿದಂತೆ ಕೆಲವರು ಉಪಾಹಾರ ಸೇವಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net