ಸಿದ್ದರಾಮಯ್ಯಗೆ ಸಾವರ್ಕರ್ ಇತಿಹಾಸ ಗೊತ್ತಿಲ್ಲ

Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವೀರ ಸಾವರ್ಕರ್ ಇತಿಹಾಸ ಗೊತ್ತಿಲ್ಲ. ಹಾಗಾಗಿ ಅವರ ಬಗ್ಗೆ ಅವಹೇಳನವಾಗಿ ಮಾತನಾಡುತ್ತಿದ್ದಾರೆ. ಇದು ಅವರ ಅವನತಿಗೆ ಕಾರಣವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಕಿಡಿಯಾದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವರ್ಕರ್ ಬ್ರಿಟೀಷರ ವಿರುದ್ಧ ಹೋರಾಡಿ ಸೆರೆಮನೆ ವಾಸವನ್ನು ಅನುಭವಿಸಿದ್ದರು. ಈ ಕುರಿತು ಇತಿಹಾಸವನ್ನು ಸಿದ್ದರಾಮಯ್ಯ ಓದಲಿ ಎಂದು ಸಲಹೆ ನೀಡಿದರು.

ರಾಜ್ಯ ಸರ್ಕಾರ ಮಾಧ್ಯಮಗಳಿಗೆ ನೀಡಿದ ಜಾಹೀರಾತಿನಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಭಾವಚಿತ್ರವನ್ನು ಕೈಬಿಟ್ಟಿದ್ದಕ್ಕೆ ಪ್ರತಿಕ್ರಿಯಿಸಿದ ಶೆಟ್ಟರ್, ಇದಕ್ಕೆ ಸರ್ಕಾರ ಉತ್ತರ ನೀಡುತ್ತದೆ. ರಾಷ್ಟ್ರಧ್ವಜ ಸಂಹಿತೆಯಲ್ಲಿ ಖಾದಿಗೆ ಮಹತ್ವ ನೀಡಲಾಗಿದೆ. ಆದರೆ, ಕಾಂಗ್ರೆಸ್​ನವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಖಾದಿಗೆ ಯಾವುದೇ ರೀತಿಯ ಮಹತ್ವ ಕಡಿಮೆ ಆಗದಂತೆ ಕೇಂದ್ರ ಸರ್ಕಾರ ವ್ಯವಸ್ಥೆ ಮಾಡುತ್ತಿದೆ. ನಾನೂ ಕೂಡ ಖಾದಿಗೆ ಆದ್ಯತೆ ನೀಡಲು ಕೇಂದ್ರಕ್ಕೆ ಮನವಿ ಮಾಡುವುದಾಗಿ ಶೆಟ್ಟರ್ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net