ಸಿಸಿಬಿ ವಿಚಾರಣೆಗೆ ಹಾಜರಾದ ಅನುಶ್ರೀ

Published on

ಮಂಗಳೂರು: ಡ್ರಗ್ಸ್ ನಂಟು ಹೊಂದಿರುವ ಆರೋಪದಲ್ಲಿ ನಟಿ, ನಿರೂಪಕಿ ಅನುಶ್ರೀ ಶನಿವಾರ ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ.
ಮಾಧ್ಯಮಗಳ ಕಣ್ಣು ತಪ್ಪಿಸಿ ನಗರದ ಹೊರ ವಲಯದಲ್ಲಿರುವ ಪಣಂಬೂರು ಎಸಿಪಿ ಕಚೇರಿಯಲ್ಲಿ ಸಿಸಿಬಿ ಇನ್ಸ್‌ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ವಿಚಾರಣೆ ನಡೆಸುತ್ತಿದ್ದಾರೆ. ಸುಮಾರು ಎರಡು ತಾಸು ವಿಚಾರಣೆ ನಡೆಯಲಿದೆ.
ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಬಂಧಿತ ಡ್ಯಾನ್ಸರ್ ಕಿಶೋರ್ ಶೆಟ್ಟಿ ನೀಡಿದ ಮಾಹಿತಿ ಮೇರೆಗೆ ಅನುಶ್ರೀಗೆ ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಗುರುವಾರ ನೋಟಿಸ್ ನೀಡಿದ್ದರು. ಶುಕ್ರವಾರವೇ ವಿಚಾರಣೆಗೆ ಹಾಜರಾಗಲು ಮಂಗಳೂರಿಗೆ ಬಂದಿದ್ದ ಅನುಶ್ರೀಗೆ ಪೊಲೀಸರು ಶನಿವಾರ ಬರಲು ಸೂಚಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net