ಸುವರ್ಣ ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿAದ ಆಚರಣೆ / ಜಿಲ್ಲಾಧಿಕಾರಿ ಅಕ್ರಂ ಪಾಷ

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ಸುವರ್ಣ ರಾಜ್ಯೋತ್ಸವದ ಹಿನ್ನಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಜಿಲ್ಲಾಡಳಿತ ಮತ್ತು ವಿವಿಧ ಕನ್ನಡ ಪರ ಸಂಘಟನೆಗಳೊAದಿಗೆ ಬಹಳ ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿAದ ಆಚರಿಸಲಾಗುವುದೆಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯು ಗಡಿ ಭಾಗದಲ್ಲಿರುವುದರಿಂದ ಕನ್ನಡದ ಅಭಿಮಾನಕ್ಕಾಗಿ ಪ್ರತಿಯೊಬ್ಬರು ಕಂಕಣ ಬದ್ಧರಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದರು.

ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ಸಂಭ್ರಮ ಸಡಗರದೊಂದಿಗೆ ಆಚರಿಸಲಾಗುವುದು, ಇಲ್ಲಿಯೇ ವೇದಿಕೆ ಕಾರ್ಯಕ್ರಮ ಜರುಗಲಿದ್ದು, ನಂತರ ಮೆರವಣಿಗೆಯನ್ನು ನಡೆಸಲಾಗುವುದು. ಮೆರವಣಿಗೆ ಮಾರ್ಗವನ್ನು ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಕಾರ್ಯಕ್ರಮಕ್ಕೆ ಮೆರಗು ತರುವ ಆನೆಯನ್ನು ತರುವುದಕ್ಕೆ ಅರಣ್ಯ ಇಲಾಖೆಯೊಂದಿಗೆ ಚರ್ಚಿಸಲಾಗುವುದು ಎಂದರು.

ಜಿಲ್ಲೆಯ ಎಲ್ಲಾ ಕಛೇರಿಯ ಅಧಿಕಾರಿ ಹಾಗೂ ಸಿಬ್ಬಂದಿವರು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು, ಶಾಲಾ ಕಾಲೇಜು ಮಕ್ಕಳಿಗೆ ಪ್ರಬಂಧ, ಆಶುಭಾಷಣ ಸ್ಪರ್ಧೆಗಳನ್ನು ಆಯಾ ಶಾಲಾ ಹಂತದಲ್ಲಿ ಏರ್ಪಡಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಲಾಯಿತು. ಕನ್ನಡದ ಬಗ್ಗೆ ಹೆಚ್ಚು ಆಸಕ್ತಿ ಉಂಟಾಗುವAತೆ ಆಂಗ್ಲ ಶಾಲೆಗಳಲ್ಲಿ ಈ ಕಾರ್ಯಕ್ರಮವನ್ನು ನಡೆಸುವಂತೆ ತಿಳಿಸಿದರು.

ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಕಛೇರಿಯಿಂದ ಜಿಲ್ಲೆಯ ಸೊಬಗು ಮತ್ತು ಸಂಸ್ಕೃತಿಯನ್ನು ಬಿಂಬಿಸುವAತಹ ಸ್ತಬ್ಧ ಚಿತ್ರಗಳೊಂದಿಗೆ ಭಾಗವಹಿಸವಂತೆ ತಿಳಿಸಲಾಗುವುದು. ಜಿಲ್ಲೆಯ ಪ್ರಮುಖ ಬೀದಿಗಳಲ್ಲಿ ಕನ್ನಡದ ಕಂಪನ್ನು ಸೂಸುವಂತೆ ಎಲ್ಲೆಲ್ಲೂ ಕನ್ನಡದ ಬಾವುಟಗಳನ್ನು ಹಾರಿಸಲಾಗುವುದು. ಪ್ಲೇಕ್ಸ್ ಹಾಗೂ ಪ್ಲಾಸ್ಟಿಕ್ ಬಾವುಟಗಳನ್ನು ಬಳಸದಂತೆ ಸೂಚಿಸಿದರು.

ಅಬ್ಬರದ ಸಂಗೀತಕ್ಕೆ ಅವಕಾಶ ಕೊಡದಂತೆ ಹೆಚ್ಚು ಹೆಚ್ಚು ಕಲಾ ತಂಡಗಳು ಭಾಗವಹಿಸುವಂತಾಗಬೇಕು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಆಟೋದವರು ಕನ್ನಡ ರಾಜ್ಯೋತ್ಸವನ್ನು ಪ್ರತಿ ಬಾರಿಯೂ ಆಚರಿಸುತ್ತಿದ್ದು, ಈ ಬಾರಿ ಸುವರ್ಣ ಸಂಭ್ರಮಕ್ಕೆ ವಿಶೇಷವಾಗಿ ಆಚರಿಸುವಂತೆ ತಿಳಿಸಿದರು. ವಿವಿಧ ಶಾಲಾ ಮಕ್ಕಳಿಂದ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಟಿ. ಚನ್ನಯ್ಯ ರಂಗಮAದಿರದಲ್ಲಿ ಏರ್ಪಡಿಸಲಾಗುವುದೆಂದರು.

ಜಿಲ್ಲೆ ಹಾಗೂ ತಾಲ್ಲೂಕುಗಳಿಂದ ಆಗಮಿಸಿದ್ದ, ವಿವಿಧ ಕನ್ನಡ ಪರ ಸಂಘಟನೆಯವರು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಸಲಹೆಗಳನ್ನು ನೀಡಿದರು.

ಅಪರ ಜಿಲ್ಲಾಧಿಕಾರಿ ಡಾ. ಶಂಕರ್ ವಣಿಕ್ಯಾಳ್, ಡಿ.ವೈ.ಎಸ್.ಪಿ ಭಾಸ್ಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗೀತಾ, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಯವರು ಉಪಸ್ಥಿತರಿದ್ದರು.

ಚಿತ್ರ ೧೩ ಕೆ.ಎಲ್.ಆರ್. ೦೬ : ಕನ್ನಡ ರಾಜ್ಯೋತ್ಸವ ಬಗ್ಗೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಅಕ್ರಂಪಾಷ, ಅಪರ ಜಿಲ್ಲಾಧಿಕಾರಿ ಡಾ.ಶಂಕರ್ ವಣಿಕ್ಯಾಳ್ ಹಾಗೂ ಕನ್ನಡ ಪರ ಸಂಘಟನೆಗಳ ಮುಖಂಡರು ಭಾಗವಹಿಸಿರುವುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net