ಚಾಮರಾಜನಗರ: ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಕಾನೂನು ,ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಸೆ.29 ರ ಮಧ್ಯರಾತ್ರಿಯಿಂದ ಅ.1ರ ಮಧ್ಯರಾತ್ರಿಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ.
ಸೂಚಿತ ಅವಧಿಯಲ್ಲಿ ಮದ್ಯ ಮಾರಾಟ,ಶೇಖರಣೆ, ಸಾಗಾಣಿಕೆ ಅಕ್ಷಮ್ಯ ಅಪರಾಧವಾಗಲಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶದಲ್ಲಿ ತಿಳಿಸಿದ್ದಾರೆ.