ಸೆಲ್ಫೀ ತೆಗೆದುಕೊಳ್ಳಲು ಹೋಗಿ ನೀರು ಪಾಲಾದ ಯುವಕ..!

H17 Neerasagara death
Published on


ಹುಬ್ಬಳ್ಳಿ: ಭಾರಿ ಮಳೆಯಿಂದ ಉಕ್ಕಿ ಹರಿಯುತ್ತಿದ್ದ ಬೃಹತ್​ ಕೆರೆಯಲ್ಲಿ ಸೆಲ್ಫೀ ತೆಗೆದುಕೊಳ್ಳಲು ಹೋಗಿದ್ದ ಯುವಕನೊಬ್ಬ ನೀರು ಪಾಲಾದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ನೀರಸಾಗರ ಜಲಾಶಯದಲ್ಲಿ ಭಾನುವಾರ ಸಂಭವಿಸಿದೆ.
ಕಲಘಟಗಿ ತಾಲೂಕಿನ ಬೇಗೂರು ಗ್ರಾಮದ ನಿವಾಸಿ ಕಿರಣ ರಜಪೂತ (22) ನೀರಿನಲ್ಲಿ ಕೊಚ್ಚಿ ಹೋದ ಯುವಕ. ತುಂಬಿ ಹರಿಯುತ್ತಿರುವ ನೀರಸಾಗರ ನೋಡಲೆಂದು ಕಿರಣ ಗೆಳೆಯರೊಡನೆ ಹೋಗಿದ್ದ. ಈ ಸಮಯದಲ್ಲಿ ಸೆಲ್ಫೀ ತೆಗೆದುಕೊಳ್ಳಲೆಂದು ಜಲಾಶಯದ ದಡದಲ್ಲಿ ನಿಂತಿದ್ದ. ನೀರಿನ ರಭಸ ಹೆಚ್ಚಾಗಿದ್ದರಿಂದ ಏಕಾಏಕಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದಳ ಸಿಬ್ಬಂದಿ ಕಿರಣದ ದೇಹದ ಹುಡುಕಾಟದಲ್ಲಿ ನಿರತರಾಗಿದ್ದರು. ಈ ಕುರಿತು ಕಲಘಟಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net