ಸೇವಾ ಕಾರ್ಯಗಳ ಮೂಲಕ ನರೇಂದ್ರ ಮೋದಿ ಹುಟ್ಟುಹಬ್ಬ ಆಚರಣೆ

PM Modi
Published on

ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬವನ್ನು ವಿವಿಧ ಸೇವಾ ಕಾರ್ಯಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಅಪೂರ್ವ ಸ್ನೇಹ ಬಳಗದ ವತಿಯಿಂದ ಚಾಮುಂಡಿಪುರಂ ವೃತ್ತದಲ್ಲಿ ಪೌರ ಕಾರ್ಮಿಕರಿಗೆ ಚಹಾ, ಬನ್ನು, ಬಾಳೆಹಣ್ಣು ವಿತರಿಸಲಾಯಿತು. ಈ ವೇಳೆ ಶಾಸಕ ಟಿ.ಎಸ್.ಶ್ರೀವತ್ಸ ಮಾತನಾಡಿ, ದೇಶದ ಮುಂದಿನ ಭವಿಷ್ಯಕ್ಕಾಗಿ ಆರ್ಥಿಕವಾಗಿ ಭದ್ರ ಬುನಾದಿ ಮತ್ತು ದೇಶದ ಗಡಿಯನ್ನು ಬಲಿಷ್ಠಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಅಯೋಧ್ಯೆ ರಾಮಮಂದಿರ ನಿರ್ಮಾಣದ ಸಂದರ್ಭದಲ್ಲಿ ಪೌರಕಾರ್ಮಿಕರ ಪಾದಪೂಜೆ ಮಾಡುವ ಅವರಿಗೆ ಗೌರವ ಸಲ್ಲಿಸಿದ್ದಾರೆ. ಆರೋಗ್ಯಕರ ಸಮಾಜ ನಿರ್ಮಾಣಕ್ಕೆ, ದೇಶದ ಪ್ರಗತಿಗೆ ಪೌರಕಾರ್ಮಿಕರ ಸೇವೆ ಅತ್ಯಗತ್ಯ ಎಂದರು.

ನಗರಪಾಲಿಕೆ ಮಾಜಿ ಸದಸ್ಯ ಮಾ.ವಿ.ರಾಮಪ್ರಸಾದ್, ಎಂ.ಡಿ.ಪಾರ್ಥಸಾರಥಿ, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷ ಅಪೂರ್ವ ಸುರೇಶ್, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೇಬಲ್ ಮಹೇಶ್, ಉಪಾಧ್ಯಕ್ಷ ಜೋಗಿ ಮಂಜು, ಜಯರಾಮ್, ನಿರೂಪಕ ಅಜಯ್ ಶಾಸ್ತ್ರಿ, ಜೀವದಾರ ರಕ್ತನಿಧಿ ಕೇಂದ್ರದ ಗಿರೀಶ್, ಪ್ರದೀಪ್, ಸಂದೀಪ್, ಕಿಶೋರ್, ದೂರ ರಾಜಣ್ಣ, ಶಿವಲಿಂಗ ಸ್ವಾಮಿ, ಆನಂದ್, ಸಚೀಂದ್ರ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net