

ಸೋಮವಾರಪೇಟೆ: ವಿಧಾನಸಭಾ ಚುನಾವಣೆಯಲ್ಲಿ ಮಡಿಕೇರಿ ಕ್ಷೇತ್ರದಿಂದ ಡಾ.ಮಂಥರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದಿಂದ ಪೊನ್ನಣ್ಣ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಶನಿವಾರ ವಿಜಯೋತ್ಸವ ಆಚರಿಸಲಾಯಿತು.
ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭ ಪಕ್ಷದ ಬ್ಲಾಕ್ ಮಹಿಳಾ ಘಟಕದ ಅಧ್ಯಕ್ಷೆ ಶೀಲಾ ಡಿಸೋಜ ಮಾತನಾಡಿ, ಬಿಜೆಪಿ ದುರಾಡಳಿತದಿಂದ ಬೇಸತ್ತ ಮತದಾರರು, ಈ ಬಾರಿ ಜಿಲ್ಲೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಕೊಡಗು ಬಿಜೆಪಿಯ ಭದ್ರಕೋಟೆ ಎಂದು ಬೀಗುತ್ತಿದ್ದವರಿಗೆ ಮತದಾರರು ತಕ್ಕ ಉತ್ತರ ನೀಡಿದ್ದಾರೆ. ಕೊಡಗು ಬಿಜೆಪಿ ಮುಕ್ತವಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆ ಅಭಿವೃದ್ಧಿಯತ್ತ ಸಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.