ಸೌಜನ್ಯಾ ಪ್ರಕರಣದ ತಪ್ಪಿತಸ್ಥರನ್ನು ಬಂಧಿಸಲು ಆಗ್ರಹ

18
Published on

ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸಿ, ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯಿಂದ ನಗರದ ಪುರಭವನದ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಬಾಲಕಿಯನ್ನು ಅತ್ಯಾಚಾರಗೈದು, ಅಮಾನವೀಯವಾಗಿ ಕೊಂದು ಸಾಕ್ಷಿ ನಾಶಪಡಿಸಿದ ನಿಜವಾದ ಆರೋಪಿಗಳು ಕಾನೂನಿನ ಕಣ್ಣಿಂದ ತಪ್ಪಿಸಿಕೊಂಡು, ರಕ್ಷಣೆ ಪಡೆಯುತ್ತಿದ್ದಾರೆ. ಭೂಹೀನರ ಹೆಸರಿನಲ್ಲಿ ಸರ್ಕಾರವನ್ನು ವಂಚಿಸಿ, ದಲಿತ ಸಮುದಾಯದ ಬಡವರನ್ನು ಕೊಂದು ಭೂಮಿಯನ್ನು ಅತಿಕ್ರಮಿಸಿಕೊಂಡಿದ್ದಾರೆ. ಅನವಶ್ಯಕ ವಿಚಾರಗಳನ್ನು ಮುಂದು ಮಾಡಿ ಜಾತಿ, ಧರ್ಮ, ಆಚರಣೆಗಳು, ಪದ್ಧತಿಗಳ ವಿರುದ್ಧ ಹೋರಾಟದ ಹೆಸರಿನಲ್ಲಿ ಗಲಭೆ ಸೃಷ್ಟಿಸುತ್ತಿದ್ದಾರೆ. ಗೋರಕ್ಷಣೆ ನೆಪ ಮಾಡಿಕೊಂಡು ವ್ಯಾಪಾರಸ್ಥರ ವಿರುದ್ಧ ಎತ್ತಿಕಟ್ಟಿ ಸಮಾಜದಲ್ಲಿ ಸಾಮರಸ್ಯ ಕದಡುತ್ತಿದ್ದಾರೆ. ಸರ್ಕಾರ ಕೂಡಲೇ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಮಿತಿಯ ಸಂಚಾಲಕ ಚೋರನಹಳ್ಳಿ ಶಿವಣ್ಣ, ಪದಾಧಿಕಾರಿಗಳಾದ ಕೆ.ವಿ.ದೇವೇಂದ್ರ, ಕಿರಂಗೂರು ಸ್ವಾಮಿ, ಹಾರೋಹಳ್ಳಿ ನಟರಾಜ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net