ಸ್ಪರ್ಧಾತ್ಮಕ ಪರೀಕ್ಷೆಗಳಂದು ನಿಷೇಧಾಜ್ಞೆ ಜಾರಿ

CTD T. venktesh---
Published on

ಚಿತ್ರದುರ್ಗ: ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್-ಬಿ ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ಜ.19 ಮತ್ತು 25ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಆಯಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಆದೇಶಿಸಿದ್ದಾರೆ.

ನಗರದ 21 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಆಯಾ ದಿನಗಳಂದು ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಜೆರಾಕ್ಸ್ ಅಂಗಡಿ, ಇಂಟರ್‌ನೆಟ್ ಕೇಂದ್ರಗಳನ್ನು ಬೆಳಗ್ಗೆ 9 ರಿಂದ ಸಂಜೆ 5 ರವರಗೆ ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರಗಳಿಗೆ ಅಭ್ಯರ್ಥಿಗಳು ಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರದಂತೆ ಡಿಸಿ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net