ಸ್ವಾಮೀಜಿಗಳ ರಾಜಕೀಯ ಪ್ರವೇಶ ತಪ್ಪಲ್ಲ

K.S. Eshwarappa (2)
ಕೆ.ಎಸ್.ಈಶ್ವರಪ್ಪ, ಮಾಜಿ ಡಿಸಿಎಂ
Published on

ಚಿತ್ರದುರ್ಗ: ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀ ಅವರು ಲೋಕಸಭೆಗೆ ಸ್ಪರ್ಧಿಸಿದರೆ, ಮೊದಲು ಖುಷಿ ಪಡುವುದು ನಾನೇ. ದೇಶ ಮತ್ತು ರಾಜ್ಯದ ಒಳಿತು ಬಯಸುವ ಮಠಾಧೀಶರು ರಾಜಕೀಯ ಪ್ರವೇಶಿಸಿದರೆ, ತಪ್ಪೇನಿಲ್ಲ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ವಸ್ವವನ್ನು ತ್ಯಾಗ ಮಾಡಿ ದೇಶ ಮತ್ತು ಸಮಾಜಕ್ಕೆ ಒಳ್ಳೆಯದು ಮಾಡಬೇಕು ಎಂಬ ಉದ್ದೇಶದಿಂದ ಸನ್ಯಾಸತ್ವ ಸ್ವೀಕರಿಸುತ್ತಾರೆ. ರಾಜಕೀಯ ಪ್ರವೇಶಿಸಿ, ಜನೋಪಯೋಗಿ ಕಾರ್ಯದಲ್ಲಿ ತೊಡಗಿದರೆ, ಯಾರೂ ಬೇಡವೆನ್ನುವುದಿಲ್ಲ. ಅವರೂ ಭಾರತೀಯ ಪ್ರಜೆಯಲ್ಲವೇ ಎಂದು ಪ್ರಶ್ನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net