ಹತ್ಯೆಣದ ಆರೋಪಿಗೆ ಜೀವಾವಧಿ ಶಿಕ್ಷೆ

crime
Published on

ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆ ಮೈಸೂರಿನ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು 25 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಮೈಸೂರಿನ ಗಾಂಧಿನಗರ ನಿವಾಸಿ ಪೆದ್ದಣ್ಣ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತ ತನ್ನ ಸ್ನೇಹಿತ ಸುರೇಶ್ ಎಂಬಾತನ ತಲೆಯ ಮೇಲೆ 2020ರ ಮೇ 12ರಂದು ಸೀಮೆಂಟ್ ಇಟ್ಟಿಗೆ ಎತ್ತಿಹಾಕಿ ಹತ್ಯೆ ಮಾಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ನರಸಿಂಹರಾಜ ಠಾಣೆ ಪೊಲೀಸರು ಆರೋಪಿ ಪೆದ್ದಣ್ಣನನ್ನು ಬಂಧಿಸಿ, ಈತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಹತ್ಯೆ ಮಾಡಿದ್ದು ಸಾಬೀತಾದ ಹಿನ್ನೆಲೆ ಪೆದ್ದಣ್ಣನಿಗೆ ಜೀವಾವಧಿ ಶಿಕ್ಷೆ ಮತ್ತು 25 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net