ಹಳಿ ಮೇಲೆ ಅಪರಿಚಿತ ಯುವತಿಯ ಶವ ಪತ್ತೆ

crime
Published on

ಬೆಂಗಳೂರು: ಕೊಡಿಗೇಹಳ್ಳಿ ಮತ್ತು ಯಲಹಂಕ ರೈಲು ಮಾರ್ಗದ ಹಳಿ ಮೇಲೆ ಅಪರಿಚಿತ ಯುವತಿಯ ಶವ ಪತ್ತೆಯಾಗಿದೆ.

ಸುಮಾರು ೨೫ ವರ್ಷದ ಯವತಿಯ ಹೆಸರು, ವಿಳಾಸ ಪತ್ತೆಯಾಗಿಲ್ಲ. ಆಕೆಯ ಮೃತದೇಹವನ್ನು ಶವಗಾರದಲ್ಲಿ ಇರಿಸಲಾಗಿದೆ. ಆಕೆಯ ಮುಖಕ್ಕೆ ಗಂಭೀರ ಪೆಟ್ಟಾಗಿರುವುದರಿಂದ ಗುರುತು ಪತ್ತೆ ಸಾಧ್ಯವಾಗುತ್ತಿಲ್ಲ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಬೆಳಗ್ಗೆ ೧೧ ಗಂಟೆಗೆ ಯುವತಿಯ ಶವ ಕಂಡ ಸ್ಥಳೀಯರು ಕೂಡಲೇ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ರೈಲ್ವೆ ಪೊಲೀಸರು ಪರಿಶೀಲಿಸಿ, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net