ಹಾಸನ ಪೆನ್‌ಡ್ರೈವ್ ಹಂಚಿಕೆ: ಪ್ರಕರಣ ರದ್ದತಿ ಕೋರಿದ್ದ ಅರ್ಜಿ ಹಿಂಪಡೆದ ಪ್ರೀತಂ ಗೌಡ

highcourt
Published on

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ಪೆನ್‌ಡ್ರೈವ್‌ಗಳನ್ನು ಹಂಚಿಕೆ ಮಾಡಿದ ಆರೋಪದ ಸಂಬಂಧ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಮಾಜಿ ಶಾಸಕ ಪ್ರೀತಂ ಗೌಡ ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯ್ನು ಗುರುವಾರ ಹಿಂಪಡೆದರು.

ಪ್ರೀತಂ ಗೌಡ ಪರವಾಗಿ ವಕಾಲತ್ತು ಹಾಕಿದ್ದ ಸಂದೀಪ್ ಪಾಟೀಲ್ ಅವರು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠದ ಮುಂದೆ ಅರ್ಜಿ ಹಿಂಪಡೆಯುವ ಸಂಬಂಧ ಮೆಮೊ ಸಲ್ಲಿಕೆ ಮಾಡಲಾಗಿದೆ ಎಂದರು.

ಇದನ್ನು ಪರಿಗಣಿಸಿದ ನ್ಯಾಯಾಲಯವು ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಸಿದರೆ ಅದನ್ನು ಪ್ರಶ್ನಿಸುವ ಸ್ವಾತಂತ್ರ್ಯವನ್ನು ಮುಕ್ತವಾಗಿರಿಸಿ ಅರ್ಜಿಯನ್ನು ಇತ್ಯರ್ಥಪಡಿಸಲಾಗಿದೆ ಎಂದು ಆದೇಶಿಸಿತು.

ಪ್ರೀತಮ್ ಗೌಡ ಅರ್ಜಿಯನ್ನು ಹಿಂಪಡೆದಿರುವ ಹಿನ್ನೆಲೆಯಲ್ಲಿ ತನಿಖಾಧಿಕಾರಿ ಪ್ರೀತಮ್‌ರನ್ನು ಬಂಧಿಸದಂತೆ ಒದಗಿಸಿದ್ದ ರಕ್ಷಣೆಯು ಸಹ ಇಲ್ಲವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net