ಹಿಂದುಳಿದ ವರ್ಗಗಳ ಸಾಮಾಜಿಕ ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆಯ ಪ್ರಗತಿ ಪರಿಶೀಲನೆ ಸಭೆ / ಸೆ.೨ ರ ಒಳಗಾಗಿ ಟ್ಯಾಗಿಂಗ್ ಕಾರ್ಯ ಪೂರ್ಣಗೊಳಿಸಿ / ಡಾ.ಪ್ರವೀಣ್ ಪಿ.ಬಾಗೇವಾಡಿ

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ಹಿಂದುಳಿದ ವರ್ಗಗಳ ಶೈಕ್ಷಣಿಕ ಸ್ಥಿತಿಗತಿಗಳ ಎರಡನೇ ಹಂತದ ಸಮೀಕ್ಷೆ ಸೆ.೨೦ ರಿಂದ ಅಕ್ಟೋಬರ್ ೭ ರವರೆಗೆ ನಡೆಯಲಿದೆ. ಸಂಬAಧಿಸಿದ ಅಧಿಕಾರಿಗಳು ಸರ್ವೇ ಕಾರ್ಯಕ್ಕೆ ಗಣತಿದಾರರನ್ನು ನೇಮಿಸಿ ಪಟ್ಟಿಯನ್ನು ಅಂತಿಮಗೊಳಿಸುವAತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪ್ರವೀಣ್. ಪಿ ಬಾಗೇವಾಡಿ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ವಿವಿಧ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ, ಜಿಲ್ಲೆಯಲ್ಲಿ ಇಂಧನ ಇಲಾಖೆಯಿಂದ ಈಗಾಗಲೇ ಶೇ.೮೦ ಮನೆಗಳಿಗೆ ಜಿಯೋ ಟ್ಯಾಗ್ ಮಾಡಿ, ಸ್ಟಿಕರ್ ಅಂಟಿಸಿ ೧೫೦ ಮನೆಗಳಿಗೆ ಒಂದು ಬ್ಲಾಕ್‌ನ್ನು ಗುರುತಿಸಿ, ರೂಟ್ ಮ್ಯಾಪ್ ಹಾಗೂ ಬ್ಲಾಕ್ ಮ್ಯಾಪ್ ಮಾಡುವ ಕಾರ್ಯ ಆರಂಭಿಸಲಾಗಿದ್ದು, ಸೆ.೧೨ ರೊಳಗೆ ಟ್ಯಾಗಿಂಗ್ ಕಾರ್ಯ ಪೂರ್ಣಗೊಳಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ, ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆ ಕಾರ್ಯವನ್ನು ೬೫ ಪ್ರಶ್ನಾವಳಿಯನ್ನೊಳಗೊಂಡ ನಾಗರೀಕ ಸೇವೆಗಳ ಎಲೆಕ್ಟ್ರಾನಿಕ್ ವಿತರಣೆ ಅಭಿವೃದ್ದಿಪಡಿಸಿರುವ ತಂತ್ರಾAಶಗಳ ಮೂಲಕ ಸರ್ವೇ ಕಾರ್ಯವನ್ನು ಕೈಗೊಳ್ಳಬೇಕು. ಈ ಕುರಿತು ತಾಲ್ಲೂಕು ಮಟ್ಟದಲ್ಲಿ ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿಗಳನ್ನು ರಚಿಸಿ ಸಮರ್ಪಕವಾಗಿ ಸಮೀಕ್ಷಾ ಕಾರ್ಯ ಕೈಗೊಳ್ಳುವಂತೆ ಸೂಚನೆ ನೀಡಿದರು.

ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ತಾಲ್ಲೂಕು ಮಟ್ಟದ ಸಮನ್ವಯ ಸಮಿತಿಯಲ್ಲಿ ತಹಶೀಲ್ದಾರ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ಪುರಸಭೆ ಮುಖ್ಯಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಹಾಯಕ ನಿರ್ದೇಶಕರು ಸದಸ್ಯರುಗಳಾಗಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲ್ಲೂಕು ಕಲ್ಯಾಣಾಧಿಕಾರಿಗಳು ಸದಸ್ಯ ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಮೊದಲನೇ ಹಂತದಲ್ಲಿ ಸಮೀಕ್ಷೆಗೆ ಸಂಬAಧಿಸಿದ ಜಿಯೋ ಟ್ಯಾಗ್ ಅಳವಡಿಸುವುದು ಪ್ರತಿಯೊಂದು ಮನೆಯ ಆರ್ ಆರ್ ನಂಬರಿಗೆ ಜಿಯೋ ಟ್ಯಾಗಿಂಗ್ ಕಾರ್ಯ ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿರುವ ೪,೧೭,೩೦೫ ಕುಟುಂಬಗಳ ಮನೆಗಳ ಆರ್ ಆರ್ ನಂಬರ್‌ಗಳಿಗೆ ಜಿಯೋ ಟ್ಯಾಗಿಂಗ್ ಮಾಡುವ ಮೂಲಕ ಶೇ.೧೦೦ ರಷ್ಟು ಪ್ರಗತಿ ಸಾಧಿಸಬೇಕು. ಸಮೀಕ್ಷೆ ಕಾರ್ಯಕ್ಕಿಂತ ಮುನ್ನ ಆರ್ ಆರ್ ನಂಬರ್‌ಗಳನ್ನು ಗುರುತಿಸುವ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು. ಯಾವುದೇ ಕುಟುಂಬಗಳು ಕೈ ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು. ಇದರಿಂದ ಎರಡನೇ ಹಂತದಲ್ಲಿ ನಡೆಯುವ ಸಮೀಕ್ಷೆ ಕಾರ್ಯವನ್ನು ವ್ಯವಸ್ಥಿತವಾಗಿ ಹಾಗೂ ವೈಜ್ಞಾನಿಕವಾಗಿ ಮತ್ತು ನಿಖರವಾಗಿ ಕಾರ್ಯಗತಗೊಳಿಸಲು ಅನುಕೂಲವಾಗಲಿರುವುದರಿಂದ ಮೊದಲನೇ ಹಂತದ ಕಾರ್ಯವನ್ನು ಅತ್ಯಂತ ಅಚ್ಚುಕಟ್ಟಾಗಿ ಯಾವುದೇ ಲೋಪಗಳಿಗೆ ಆಸ್ಪದ ನೀಡದೆ ನಿರ್ವಹಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರತಿ ೧೫೦ ಮನೆಗಳಿಗೆ ಒಬ್ಬ ಗಣತಿದಾರರಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ಗುರುತಿಸಲಾಗಿದೆ. ಪ್ರತಿ ೧೫ ರಿಂದ ೨೦ ಗಣತಿದಾರರಿಗೆ ಒಬ್ಬರಂತೆ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರು, ಬಿಆರ್‌ಸಿ, ಸಿಆರ್‌ಸಿ ಗಳು ಮೇಲ್ವಿಚಾರಕರಾಗಿ ನಿಗಾ ವಹಿಸಬೇಕು. ಪ್ರತಿ ೫೦ ಗಣತಿದಾರರಿಗೆ ಓರ್ವ ಮಾಸ್ಟರ್ ಟ್ರೇನರ್ ನಿಯೋಜನೆ ಮಾಡಲಾಗಿದೆ. ಮಾಸ್ಟರ್ ಟ್ರೇನರ್ ಸಮೀಕ್ಷಾ ಕಾರ್ಯಗಳ ಕುರಿತು ಸಂಪೂರ್ಣ ಮಾಹಿತಿ ಹೊಂದಿರುವ ಮಾಸ್ಟರ್ ಟ್ರೇನರ್‌ಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಟಿ. ಕೆ. ರಮೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ನಾರಾಯಣಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಗೀತಾ, ಜಿಲ್ಲಾ ಸಾಂಖ್ಯೆಕ ಅಧಿಕಾರಿ ರಮೇಶ್, ಕೋಲಾರ ನಗರಸಭೆ ಆಯುಕ್ತರು ನವೀನ್ ಚಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶ್ರೀನಿವಾಸ್ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಚಿತ್ರ ೧೦ ಕೆ.ಎಲ್.ಆರ್. ೦೪ : ಜಿಲ್ಲಾಪಂಚಾಯ್ತಿ ಸಭಾಂಗಣದಲ್ಲಿ ಸಿಇಓ ಡಾ.ಪ್ರವೀಣ್ ಪಿ.ಬಾಗೇವಾಡಿ ಅಧ್ಯಕ್ಷತೆಯಲ್ಲಿ ಹಿಂದುಳಿದ ವರ್ಗಗಳ ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ಪ್ರಗತಿಯ ಬಗ್ಗೆ ಸಭೆ ನಡೆಸಿದರು. ಉಪಕಾರ್ಯದರ್ಶಿ ಟಿ.ಕೆ.ರಮೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಉಪನಿರ್ದೇಶಕ ನಾರಾಯಣಸ್ವಾಮಿ ಮುಂತಾದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net