ಹಿಂದುಳಿದ ಸಮಾಜದ ಕುಟುಂಬಗಳಿಗೆ ನೆರವು

3 kdr 5 calender
ಕಡೂರು ತಾಲೂಕಿನ ಸಿ. ದಾಸರಹಳ್ಳಿ ಗೊಲ್ಲರಹಟ್ಟಿ ಗ್ರಾಮದಲ್ಲಿ ರಾಜ್ಯ ಕಾಡುಗೊಲ್ಲ ಸಂಘದಿಂದ ಕ್ಯಾಲೆಂಡರನ್ನು ಸಂಘದ ರಾಜ್ಯಾಧ್ಯಕ್ಷ ರಾಜಣ್ಣ ಬಿಡುಗಡೆಗೊಳಿಸಿದರು. ಪ್ರಭುದೇವ್, ಈರಪ್ಪ, ದೇವಿರಪ್ಪ, ನಾಗರಾಜ್ ಮತ್ತಿತರರಿದ್ದರು.
Published on

ಕಡೂರು: ಸಮಾಜದ ಉನ್ನತಿಗೆ ಶಿಕ್ಷಣದ ಅವಶ್ಯಕತೆ ಹೆಚ್ಚಿದೆ. ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು ಸಮಾಜದ ಕರ್ತವ್ಯ ಎಂದು ಕಾಡುಗೊಲ್ಲರ ಸಂಘದ ರಾಜ್ಯಾಧ್ಯಕ್ಷ ರಾಜಣ್ಣ ತಿಳಿಸಿದರು. ತಾಲೂಕಿನ ಅಂತರಘಟ್ಟೆ ಸಮೀಪದ ಸಿ.ದಾಸರಹಳ್ಳಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಭಾನುವಾರ ಜಿಲ್ಲಾ ಕಾಡುಗೊಲ್ಲರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ರಾಜ್ಯ ಕಾಡುಗೊಲ್ಲರ ಸಂಘದ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದರು.

ಕಾಡುಗೊಲ್ಲ ಸಮಾಜ ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಹಿಂದುಳಿದಿದ್ದು ಇದಕ್ಕೆ ಬಹುಮುಖ್ಯ ಕಾರಣ ಶಿಕ್ಷಣದ ಕೊರತೆ. ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಉತ್ತಮ ಶಿಕ್ಷಣ ಕೊಡಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಬೇಕಿದೆ. ಈಗಾಗಲೇ ರಾಜ್ಯ ಸಂಘದಿಂದ ಉನ್ನತ ವಿದ್ಯಾಭ್ಯಾಸ ಮಾಡುತ್ತಿರುವ ಸಮಾಜದ ಮಕ್ಕಳಿಗೆ ಸ್ಪರ್ಧಾತ್ಮಕ ತರಬೇತಿ ಕೇಂದ್ರವನ್ನು ತೆಗೆಯಲಾಗುವುದು ಎಂದರು.

ಆರ್ಥಿಕವಾಗಿ ಹಿಂದುಳಿದ ಸಮಾಜದ ಕುಟುಂಬಗಳಿಗೆ ಸಂಘ ನೆರವು ನೀಡುವ ಗುರಿ ಹೊಂದಿದೆೆ. ಬಹುದಿನಗಳ ಬೇಡಿಕೆಯಾಗಿರುವ ಕಾಡುಗೊಲ್ಲರ ಜಾತಿ ಪ್ರಮಾಣಪತ್ರ ಪಡೆಯಲು ರಾಜ್ಯ ಮಟ್ಟದ ಸಮಾವೇಶಗಳನ್ನು ನಡೆಸಿ ನಮ್ಮ ಹಕ್ಕೋತ್ತಾಯವನ್ನು ಮಂಡಿಸಿ ಸರ್ಕಾರದ ಮಟ್ಟದಲ್ಲಿ ಹೋರಾಟದ ಮೂಲಕ ಗಮನಸೆಳೆಯಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹೋರಾಟದ ಫಲ ದೊರಕುವ ವಿಶ್ವಾಸ ಇರುವುದಾಗಿ ತಿಳಿಸಿದರು.

ನಿವೃತ್ತ ಡಿಡಿಪಿಐ ರಾಮಪ್ಪ ಮಾತನಾಡಿ, ಸಂಘಟನೆಯಿಂದ ಮಾತ್ರ ಸವಲತ್ತುಗಳನ್ನು ಪಡೆದುಕೊಳ್ಳಲು ಸಾಧ್ಯ ಎಂದು ಹೇಳಿದರು. ಜಿಲ್ಲಾ ಕಾರ್ಯಾಧ್ಯಕ್ಷ ದೇವಿರಪ್ಪ,

ರಾಜ್ಯ ಸಂಘಟನಾ ಕಾರ್ಯದರ್ಶಿ ಪ್ರಭುದೇವ, ನಾಗರಾಜ್, ಚಿಕ್ಕನಾಯಕನಹಳ್ಳಿ, ಚನ್ನಗಿರಿ, ಹೊಸದುರ್ಗ, ಅರಸೀಕೆರೆ ಹಾಗೂ ಗುಬ್ಬಿ ತಾಲೂಕುಗಳ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net