ಹಿಮವದ್ ಗೋಪಾಲಸ್ವಾಮಿ ಬೆಟ್ಟದ ರಸ್ತೆಯಲ್ಲಿ ಕೊರಕಲು

IMG-20221016-WA0100
ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ರಸ್ತೆಯಲ್ಲಿ ಕೊರಕಲು ಉಂಟಾಗಿದೆ.
Published on

ಗುಂಡ್ಲುಪೇಟೆ: ಕಳೆದ ಕೆಲ ದಿನಗಳಿಂದ ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ತಾಲೂಕಿನ ಇತಿಹಾಸ ಪ್ರಸಿದ್ಧ ಧಾರ್ಮಿಕ ಯಾತ್ರಾ ಕೇಂದ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ರಸ್ತೆಯಲ್ಲಿ ಭಾರಿ ಕೊರಕಲು ಉಂಟಾಗಿದ್ದರಿಂದ ಭಾನುವಾರ ಸಂಚಾರ ಬಂದ್ ಮಾಡಲಾಗಿತ್ತುೆ. ಬೆಟ್ಟದ ದೊಡ್ಡ ತಿರುವಿನ ಬಳಿ ಮತ್ತು ಕೆಲವು ಕಡೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟ ಸ್ಥಿತಿಯಲ್ಲಿದ್ದ ಕಾರಣ ಭಕ್ತರ ಪ್ರವೇಶ ತಡೆಯಲಾಗಿದೆ.

ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಒಂದು ವಾರದಿಂದ ನಿರಂತರ ಮಳೆಯಾಗಿದ್ದರಿಂದ ನೀರು ಹರಿದು ರಸ್ತೆಯ ಎರಡು ಬದಿಯಲ್ಲಿ ಕೊರಕಲು ಉಂಟಾಗಿದೆ. ಈ ಹಿನ್ನೆಲೆ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಪ್ಪಲಿನ ಗೇಟ್‌ನಲ್ಲಿ ನಿಲುಗಡೆ ಮಾಡಲಾಗಿದೆ. ಭಾನುವಾರವಾದ ಹಿನ್ನೆಲೆ ಮೈಸೂರು, ಬೆಂಗಳೂರು ಸೇರಿದಂತೆ ನೆರೆಯ ತಮಿಳುನಾಡು, ಕೇರಳದಿಂದ ಹೆಚ್ಚಿನ ಭಕ್ತರು ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಲು ಆಗಮಿಸಿದ್ದರು. ಆದರೆ ಬೆಟ್ಟಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಿರುವ ಕಾರಣ ಭಕ್ತಾದಿಗಳು ಹಾಗೂ ಪ್ರವಾಸಿಗರು ನಿರಾಸೆಯಿಂದ ವಾಪಸ್ ತೆರಳಿದರು. ಇನ್ನು ಹಂಗಳ ಗ್ರಾಮದ ಪ್ರವೇಶ ದ್ವಾರದಲ್ಲಿ ಬೆಟ್ಟಕ್ಕೆ ಹೋಗುವ ಮಾರ್ಗದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಪ್ರವಾಸಿಗರನ್ನು ತೆರಳದಂತೆ ಸೂಚನೆ ನೀಡುತ್ತಿದ್ದು, ಭಕ್ತರು ನಿರಾಸೆಗೆ ಒಳಗಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net