

ಕುಶಾಲನಗರ: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲುಗುಂದ ಗ್ರಾಮದಲ್ಲಿ ಧಾರಾಕಾರ ಮಳೆಯಿಂದ ಧರ್ಮಲಿಂಗಂ ಎಂಬುವರ ಮನೆ ಸೋಮವಾರ ಸಂಪೂರ್ಣವಾಗಿ ಬಿದ್ದು ಹೋಗಿದೆ.
ಸ್ಥಳಕ್ಕೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಭಾಸ್ಕರ್ ನಾಯಕ್ ಮತ್ತು ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಮನೆಯ ಮಾಲೀಕ ಧರ್ಮಲಿಂಗಂ ಮತ್ತು ಕುಟುಂಬದವರೊಂದಿಗೆ ಮಾತನಾಡಿದ ಭಾಸ್ಕರ್‌ನಾಯಕ್ ಅವರು ವಿಷಯವನ್ನು ಕೂಡಲೇ ಜಿಲ್ಲಾಡಳಿತಕ್ಕೆ ತಿಳಿಸಲಾಗುವುದು. ಸರ್ಕಾರದಿಂದ ಸಿಗುವ ಪರಿಹಾರವನ್ನು ಶೀಘ್ರವೇ ವಿತರಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಕರೆ ಮಾಡಿ ಗ್ರಾಮ ಪಂಚಾಯಿತಿಯಿಂದ ಸಿಗುವಂತ ಸೌಲಭ್ಯಗಳನ್ನು ಆದಷ್ಟು ಬೇಗ ನೀಡಬೇಕೆಂದು ಸೂಚಿಸಿದರು.
ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ಮಣಿಕಂಠ ಮತ್ತು ಲಕ್ಷ್ಮೀ ಇದ್ದರು.