

ಮೈಸೂರು: ಜಿಲ್ಲೆಯ ಸರ್ಕಾರಿ ನೌಕರರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ತಿ.ನರಸೀಪುರ ತಾಲೂಕು ಕಚೇರಿ ದ್ವಿತೀಯ ದರ್ಜೆ ಸಹಾಯಕರಾಗಿದ್ದ ಅರುಣ್(44) ಮೃತ. ಅರುಣ್ ಭಾನುವಾರ ಬಸ್‌ನಲ್ಲಿ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಕರೆದೋಯ್ಯುವ ಮಾರ್ಗ ಮಧ್ಯೆಯೇ ಅರಣ್ ಕೊನೆಯುಸಿರೆಳೆದಿದ್ದಾರೆ. ಮೈಸೂರಿನಲ್ಲಿ ವಾಸವಿದ್ದ ಅರುಣ್ ಮೂಲತಃ ಮಂಡ್ಯ ಜಿಲ್ಲೆ ಕಿಲಾರ ಗ್ರಾಮದ ನಿವಾಸಿ.