ಹೈಟೆಕ್ ಶೌಚಗೃಹ ನಿರ್ಮಾಣಕ್ಕೆ ಭೂಮಿಪೂಜೆ

22 SARAG 2 (1)
ಸರಗೂರು ತಾಲೂಕಿನ ಬಡಗಲಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಹೈಟೆಕ್ ಶೌಚಗೃಹ ನಿರ್ಮಾಣಕ್ಕೆ ಗ್ರಾಪಂ ಉಪಾಧ್ಯಕ್ಷೆ ಜ್ಯೋತಿ ರಮೇಶ್ ಭೂಮಿಪೂಜೆ ನೆರವೇರಿಸಿದರು. ಬಿ.ಎಸ್.ಕೂಸಪ್ಪ, ಗುರುಪ್ರಸಾದ್, ರವೀಶ್ ಇದ್ದರು.
Published on

ಸರಗೂರು: ತಾಲೂಕಿನ ಬಡಗಲಪುರ ಗ್ರಾಮದ ಸರ್ಕಾರಿ ಫ್ರೌಢಶಾಲೆ ಆವರಣದಲ್ಲಿ ಹೈಟೆಕ್ ಶೌಚಗೃಹ ನಿರ್ಮಾಣಕ್ಕೆ ಐಟಿಸಿ ಮತ್ತು ಮೈಕ್ಯಾಪ್ಸ್ ವತಿಯಿಂದ ಭೂಮಿಪೂಜೆ ನೆರವೇರಿಸಲಾಯಿತು.

ಹಾದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಗಲಪುರ ಗ್ರಾಮದಲ್ಲಿ ಹಾದನೂರು ಗ್ರಾಪಂ ಸಹಯೋಗದೊಂದಿಗೆ ಶಾಲಾ ಮಕ್ಕಳಿಗಾಗಿ ಹೈಟೆಕ್ ಶೌಚಗೃಹ ನಿರ್ಮಾಣ ಮಾಡಲಾಗುವುದು. 5.40 ಲಕ್ಷ ರೂ. ವೆಚ್ಚದಲ್ಲಿ ಎರಡು ಶೌಚಗೃಹ ಹಾಗೂ ಸಮರ್ಪಕ ನೀರಿನ ಸಂಪರ್ಕ ಕಲ್ಪಿಸಲಾಗುವುದು ಎಂದು ಮೈಕ್ಯಾಪ್ಸ್ ಇಂಜಿನಿಯರ್ ಗುರುಪ್ರಸಾದ್ ತಿಳಿಸಿದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜ್ಯೋತಿ ರಮೇಶ್, ಸದಸ್ಯರಾದ ಗಂಗಾಧರ್, ಮಂಜುಳಾ ರಾಮಚಂದ್ರ, ಶಿವಲಿಂಗಯ್ಯ, ಎಸ್‌ಡಿಎಂಸಿ ಅಧ್ಯಕ್ಷ ಬಿ.ಎಸ್.ಕೂಸಪ್ಪ, ಗುತ್ತಿಗೆದಾರ ರವಿಕುಮಾರ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಬಿ.ಜೆ.ಅಶೋಕ್ ಕುಮಾರ್, ಶಿಕ್ಷಕರಾದ ಪುಟ್ಟಸ್ವಾಮಿ, ಮಲ್ಲಿಕಾರ್ಜುನಸ್ವಾಮಿ. ರಾಮನಾಯ್ಕ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net