

ತಿ.ನರಸೀಪುರ ತಾಲೂಕಿನ ಬನ್ನೂರು ಪಟ್ಟಣದಲ್ಲಿ ಶುಕ್ರವಾರ ಚಲಿಸುತ್ತಿದ್ದ ನಗರ ಸಾರಿಗೆ ಬಸ್ ತಾಂತ್ರಿಕ ದೋಷದಿಂದ ಹೊತ್ತಿ ಉರಿದಿದೆ. ಮೈಸೂರು ನಗರ ಸಾರಿಗೆ ಬಸ್ ಇದಾಗಿದ್ದು, ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಬಸ್ ಅನ್ನು ರಸ್ತೆಬದಿ ನಿಲ್ಲಿಸಿದ್ದರಿಂದ ಪ್ರಯಾಣಿಕರು ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಮುಂಭಾಗ ಸುಟ್ಟು ಕರಕಲಾಗಿದೆ. ಬೆಂಕಿಯನ್ನು ಅಗ್ನಿಶಾಮಕ ದಳ ನಂದಿಸಿದೆ. ಸ್ಥಳಕ್ಕೆ ಬನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.