ಹೋರಾಟಗಾರರನ್ನು ಗೌರವಿಸಿ

1 School
Published on

ಸಾಲಿಗ್ರಾಮ: ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಹೋರಾಟಗಾರರನ್ನು ಪ್ರತಿಯೊಬ್ಬ ಪ್ರಜೆಯೂ ಗೌರವಿಸಬೇಕು ಎಂದು ಹನಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಸದಸ್ಯ ಪ್ರಸನ್ನ ಹೇಳಿದರು.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿ ಯಾವುದೇ ವ್ಯಕ್ತಿ ದೌರ್ಜನ್ಯ, ಭ್ರಷ್ಟಾಚಾರ ಮತ್ತು ಹಿಂಸಾಚಾರಕ್ಕೆ ಒಳಗಾಗದೆ ಸ್ವತಂತ್ರವಾಗಿ ತಮ್ಮ ಬದುಕು ನಡೆಸಿದಾಗ ಮಾತ್ರ ಆ ವ್ಯಕ್ತಿಗಳಿಗೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದಂತಾಗುತ್ತದೆ. ಹಾಗಾಗಿ, ಸಮಾಜದಲ್ಲಿರುವ ಅಧಿಕಾರಿಗಳು ಮತ್ತು ಜನರು ತಳಮಟ್ಟದ ಜನರಿಗೆ ಯಾವುದೇ ಹಿಂಸೆ ಮಾಡದೆ ಎಲ್ಲರನ್ನೂ ಸರಿ ಸಮಾನವಾಗಿ ಕಾಣಬೇಕು. ಆಗ ಮಾತ್ರ ಸ್ವಾತಂತ್ರ್ಯಕ್ಕೆ ಗೌರವ ನೀಡಿದಂತಾಗುತ್ತದೆ ಎಂದರು.
ಮುಖ್ಯ ಶಿಕ್ಷಕ ದೇವರಾಜ ಗೌಡ, ಸಹ ಶಿಕ್ಷಕಿಯರಾದ ಚಾಂದಿನಿ, ದಿವ್ಯಾ, ಸೌಂದರ್ಯ, ಎಸ್‌ಡಿಎಂಸಿ ಅಧ್ಯಕ್ಷ ಕುಮಾರಸ್ವಾಮಿ, ಉಪಾಧ್ಯಕ್ಷ ಸುಗುಣ, ಸದಸ್ಯ ನರೇಂದ್ರಬಾಬು, ಹನಸೋಗೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ನಟರಾಜ್. ಗ್ರಾಪಂ ಅಧ್ಯಕ್ಷ ಹರೀಶ, ಉಪಾಧ್ಯಕ್ಷೆ ರೂಪಾ, ಗ್ರಾಪಂ ಸದಸ್ಯ ಮಧುಸೂದನ ಹಾಜರಿದ್ದರು.
ಜಾಥಾ: ಕಾರ್ಯಕ್ರಮಕ್ಕೂ ಮುನ್ನ ಶಾಲಾ ಮುಖ್ಯ ಶಿಕ್ಷಕ ದೇವರಾಜಗೌಡ, ಎಸ್‌ಡಿಎಂಸಿ ಅಧ್ಯಕ್ಷ ಕುಮಾರಸ್ವಾಮಿ ನೇತೃತ್ವದಲ್ಲಿ ಶಾಲಾ ಮಕ್ಕಳು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಹನೀಯರ ಭಾವಚಿತ್ರಗಳನ್ನು ಹಿಡಿದು ಜಾಥಾ ನಡೆಸಿದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net