

ಗಾಂಧಿನಗರ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ರ ಅಹಮದಾಬಾದ್ ಭೇಟಿಗೆ ಸುಮಾರು 100 ಕೋಟಿ ರೂ. ಖರ್ಚು ಮಾಡಲಾಗಿದೆ ಎಂಬುದು ಆಧಾರರಹಿತ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ಹೇಳಿದ್ದಾರೆ.
‘ಅಧ್ಯಕ್ಷ ಟ್ರಂಪ್ರಿಗಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದಿಂದ 8 ಕೋಟಿ ರೂ. ಹಾಗೂ ಅಹಮದಾಬಾದ್ ಮಹಾನಗರ ಪಾಲಿಕೆ ವತಿಯಿಂದ 4.5 ಕೋಟಿ ರೂ. ಖರ್ಚು ಮಾಡಲಾಗಿದೆ.
ನಮಸ್ತೆ ಟ್ರಂಪ್ ಕಾರ್ಯಕ್ರಮಕ್ಕೆ ಒಟ್ಟು ಖರ್ಚು 12.5 ಕೋಟಿ ರೂ. ಹಣ ಖರ್ಚು ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.