ಜ್ಞಾನಾರ್ಜನೆಗೆ ಪತ್ರಿಕೆ ಅಧ್ಯಯನವೇ ದಾರಿ

vidyarthi
ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ವತಿಯಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಮಿತ್ರ ವಿತರಿಸಲಾಯಿತು
Published on

ವಿಜಯವಾಣಿ ಸುದ್ದಿಜಾಲ ಕೊಕ್ಕರ್ಣೆ

ಗ್ರಾಮೀಣ ಭಾಗದ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಶಾಲೆಯ ಪಠ್ಯದ ಜತೆ ವಿಜಯವಾಣಿ ವಿದ್ಯಾರ್ಥಿಮಿತ್ರ ಓದುವುದರಿಂದ ಹೆಚ್ಚಿನ ಅಂಕ ಗಳಿಸಲು ಸಾಧ್ಯ. ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಮುಂದುವರಿದಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆಯುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಮಿತ್ರ ಸಹಕಾರಿ ಎಂದು ಕೊಕ್ಕರ್ಣೆ ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕಿ ಡಾ.ಸುನೀತಾ ಡಿ. ಶೆಟ್ಟಿ ಹೇಳಿದರು.

ಬುಧವಾರ ಕೊಕ್ಕರ್ಣೆಯ ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ವತಿಯಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಎಸ್.ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಮಿತ್ರ ವಿತರಿಸಿ ಮಾತನಾಡಿದರು.

ಉಪಪ್ರಾಂಶುಪಾಲ ಈಶ್ವರ ಅಂಬಿಗ ಅಧ್ಯಕ್ಷತೆ ವಹಿಸಿದ್ದರು. ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘದ ಆಡಳಿತ ನಿರ್ದೇಶಕ (ಪ್ರಭಾರ) ಅಭಿಷೇಕ ಶೆಟ್ಟಿ, ವಿಜಯವಾಣಿ ವರದಿಗಾರ ಅನಂತ ನಾಯಕ್ ಮುದ್ದೂರು, ವಿಜಯವಾಣಿ ಮಾರುಕಟ್ಟೆ ವಿಭಾಗದ ನವೀನ್, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಹಿರಿಯ ಶಿಕ್ಷಕ ಕೃಷ್ಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ನಿರ್ದೇಶಕರ ಮಾರ್ಗದರ್ಶನದಂತೆ ಈ ಶಾಲೆಗೆ ಫಲಿತಾಂಶ ದೊರೆಯುವಂತಾಗಲು ಹಾಗೂ ಪ್ರಗತಿಗಾಗಿ ಪ್ರಾಯೋಕತ್ವ ನೀಡುತ್ತಿದ್ದೇವೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಂಡು ಉತ್ತಮ ಅಂಕ ಪಡೆಯುವ ಮೂಲಕ ಸಾಧನೆ ಮಾಡಬೇಕು.-ಅಭಿಷೇಕ್ ಶೆಟ್ಟಿ, ಪ್ರಭಾರ ಆಡಳಿತ ನಿರ್ದೇಶಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net