

ಭೇ ಓವಲ್: ಇಲ್ಲಿನ ಬೇ ಓವಲ್ ಮೈದಾನದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಕಿವೀಸ್ ಆಟಗಾರ ಕೇನ್ ವಿಲಿಯಮ್ಸನ್ ಬ್ಯಾಕ್ ಟು ಬ್ಯಾಕ್ ಶತಕಗಳನ್ನು ಬಾರಿಸುವ ಮೂಲಕ ಹಲವು ದಾಖಲೆಗಳನ್ನು ಬರೆದಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ ಸ್ಟೀವ್ ಸ್ಮಿತ್ ಹೆಸರಿನಲ್ಲಿರುವ ಸರಿಗಟ್ಟಿದ್ದಾರೆ.
ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಇಳಿದ ವಿಲಿಯಮ್ಸನ್ ಮೊದಲ ಇನಿಂಗ್ಸ್ನಲ್ಲಿ 118 ರನ್ ಹಾಗೂ ದ್ವಿತೀಯ ಇನಿಂಗ್ಸ್ನಲ್ಲಿ 109 ರನ್ ಬಾರಿಸಿದ್ದಾರೆ. ಇದರೊಂದಿಗೆ ನ್ಯೂಜಿಲೆಂಡ್ ಪರ ಟೆಸ್ಟ್ ಪಂದ್ಯವೊಂದರಲ್ಲಿ ಬ್ಯಾಕ್ ಟು ಬ್ಯಾಕ್ ಶತಕ ಬಾರಿಸಿದ 5ನೇ ಬ್ಯಾಟರ್ ಎನಿಸಿಕೊಂಡರು. ಅಷ್ಟೇ ಅಲ್ಲದೆ ಈ ಎರಡು ಶತಕಗಳೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ 31 ಶತಕಗಳನ್ನು ಪೂರೈಸಿದ ವಿಶ್ವದ 2ನೇ ಬ್ಯಾಟರ್ ಎಂಬ ಹಿರಿಮೆಗೂ ಪಾತ್ರರಾಗಿದ್ದಾರೆ.
ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ 32 ಶತಕಗಳನ್ನು ಬಾರಿಸುವ ಮೂಲಕ ಅಗ್ರಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಟೆಸ್ಟ್ ಸ್ಪೆಷಲಿಸ್ಟ್ ಸ್ಮಿತ್ 170 ಇನಿಂಗ್ಸ್ಗಳ ಮೂಲಕ 31 ಶತಕ ಬಾರಿಸಿ ದಾಖಲೆ ಬರೆದಿದ್ದಾರೆ. ಇದೀಗ ಈ ದಾಖಲೆಯನ್ನು ಕೇನ್ ವಿಲಿಯಮ್ಸನ್ ಸರಿಗಟ್ಟಿದ್ದಾರೆ. ಈ ಮೂಲಕ ಅತಿ ಕಡಿಮೆ ಇನಿಂಗ್ಸ್ಗಳಲ್ಲಿ 31 ಟೆಸ್ಟ್ ಶತಕ ಬಾರಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಸ್ಮಿತ್ ಜೊತೆ ಜಂಟಿಯಾಗಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.
ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್. ಟೆಸ್ಟ್ನಲ್ಲಿ 31 ಶತಕಗಳನ್ನು ಬಾರಿಸಲು ತೆಗೆದುಕೊಂಡಿದ್ದು ಕೇವಲ 165 ಇನಿಂಗ್ಸ್ಗಳು ಮಾತ್ರ. ಇದು ಕೂಡ ವಿಶ್ವ ದಾಖಲೆಯಾಗಿ ಉಳಿದಿದೆ.