More

    ವಿಶ್ವಕಪ್​ನಲ್ಲಿ ಟೀಂ ಇಂಡಿಯಾಗೆ ತಲೆನೋವಾಗಿ ಪರಿಣಮಿಸಿದ ನ್ಯೂಜಿಲೆಂಡ್; ತಂಡದಲ್ಲಿ ಬದಲಾವಣೆ ಸಾಧ್ಯತೆ

    ಮುಂಬೈ: 2023ನೇ ಏಕದಿನ ವಿಶ್ವಕಪ್​ ಟೂರ್ನಿಯ ನಾಕೌಟ್​ ಪಂದ್ಯಗಳಿಗೆ ಕ್ಷಣಗಣನೆ ಆರಂಭವಾಗಿದ್ದು, ಇಂದು (ನವೆಂಬರ್ 15) ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್​ ತಂಡ ಸೆಣಸಾಡಲಿದೆ. ಇಂದುನ ನಡೆಯುವ ಪಂದ್ಯದ ಮತ್ತೊಂದು ವಿಶೇಷತೆ ಏನೆಂದರೆ 2019ರಲ್ಲಿ ನಡೆದ ಏಕದಿನ ವಿಶ್ವಕಪ್​ ನಾಕೌಟ್​ ಪಂದ್ಯದಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಿದ್ದವು.

    ಇಂಗ್ಲೇಂಡ್​ನ ಮ್ಯಾಂಚೆಸ್ಟರ್​ನಲ್ಲಿ ನಡೆದ ಮಳೆಭಾದಿತ ಸೆಮಿಫೈನಲ್ ಪಂದ್ಯದಲ್ಲಿ ಭಾರತ 18ರನ್​ಗಳ ಅಂತರದಲ್ಲಿ ಸೋತು ಫೈನಲ್​ಗೆ ಏರುವಲ್ಲಿ ವಿಫಳವಾಗಿತ್ತು. ಇದೀಗ ನಾಲ್ಕು ವರ್ಷಗಳ ಬಳಿಕ ಸೋಲಿನ ಸೇಡನ್ನು ತೀರಿಸಿಕೊಳ್ಳುವ ಅವಕಾಶ ಟೀಮ್ ಇಂಡಿಯಾ ಮುಂದಿದೆ. ಹೀಗಾಗಿ ವಾಂಖೆಡೆ ಸ್ಟೇಡಿಯಂನಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದಾಗಿದೆ.

    ಮೊದಲ ಗೆಲುವು

    ಏಕೆಂದರೆ ಐಸಿಸಿ ಟೂರ್ನಿಗಳಲ್ಲಿ ಕಿವೀಸ್ ಪಡೆ ವಿರುದ್ಧ ಟೀಮ್ ಇಂಡಿಯಾ ವಿರುದ್ಧ ಪಾರುಪತ್ಯ ಮೆರೆಯುತ್ತಾ ಬಂದಿದೆ. 2003 ರ ಬಳಿಕ ನಡೆದ ಏಕದಿನ ವಿಶ್ವಕಪ್, ಟಿ20 ವಿಶ್ವಕಪ್, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಭಾರತದ ವಿರುದ್ಧ ನ್ಯೂಜಿಲೆಂಡ್ ಮೇಲುಗೈ ಸಾಧಿಸುತ್ತಾ ಬಂದಿದೆ.

    2007 ರ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದ್ದರೂ, ಲೀಗ್​ ಹಂತದ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 10 ರನ್​ಗಳಿಂದ ಸೋಲನುಭವಿಸಿತ್ತು. 2016 ರ ಟಿ20 ವಿಶ್ವಕಪ್​ನಲ್ಲೂ ಭಾರತಕ್ಕೆ ಸೋಲುಣಿಸುವಲ್ಲಿ ನ್ಯೂಝಿಲೆಂಡ್ ಯಶಸ್ವಿಯಾಗಿತ್ತು. 2019 ರ ಏಕದಿನ ವಿಶ್ವಕಪ್​ ಸೆಮಿಫೈನಲ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ ಭಾರತ 18 ರನ್​ಗಳಿಂದ ಸೋಲೊಪ್ಪಿಕೊಂಡಿತ್ತು. 2021 ರಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಭಾರತದ ವಿರುದ್ಧ ನ್ಯೂಝಿಲೆಂಡ್ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. 2021ರ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ವಿರುದ್ಧ ನ್ಯೂಜಿಲೆಂಡ್ 8 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿತ್ತು.

    Rahul Rohit

    ಈ ಎಲ್ಲಾ ಕಾರಣಗಳಿಂದಾಗಿ ಈ ಬಾರಿ ಕೂಡ ಟೀಂ ಇಂಡಿಯಾ ಪಾಲಿಗೆ ನ್ಯೂಜಿಲೆಂಡ್ ಡೇಂಜರಸ್ ಎನ್ನಬಹುದು. ಇದಾಗ್ಯೂ ಈ ಬಾರಿಯ ವಿಶ್ವಕಪ್​ನ ಲೀಗ್ ಹಂತದಲ್ಲಿ ಕಿವೀಸ್​ ವಿರುದ್ಧ ಟೀಮ್ ಇಂಡಿಯಾ 4 ವಿಕೆಟ್​ಗಳಿಂದ ಜಯ ಸಾಧಿಸಿದೆ. ಇದು 20 ವರ್ಷಗಳ ಬಳಿಕ ಐಸಿಸಿ ಟೂರ್ನಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ದಕ್ಕಿದ ಮೊದಲ ಗೆಲುವಾಗಿದೆ.

    ಇದನ್ನೂ ಓದಿ: ಉಡುಪಿ ಕೊಲೆ ಪ್ರಕರಣ; ಬೆಳಗಾವಿಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

    ಬದಲಾವಣೆ ಸಾಧ್ಯತೆ

    ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್‌ನಲ್ಲಿ ಭಾರತ ಅತ್ಯಂತ ಬಲಿಷ್ಠವಾಗಿರುವ ತಂಡವಾಗಿದೆ. ಲೀಗ್ ಹಂತದಲ್ಲಿ ಒಂದೇ ಒಂದು ಸೋಲು ಕಾಣದ ಟೀಂ ಇಂಡಿಯಾ ಎಲ್ಲ ಪಂದ್ಯವನ್ನು ಸುಲಭವಾಗಿ ಗೆದ್ದು ಅಜೇಯವಾಗಿ ಸೆಮಿಫಿನಾಲೆ ಪ್ರವೇಶಿಸಿದೆ. ಹಾರ್ದಿಕ್ ಪಾಂಡ್ಯ ಗಾಯದ ಸಮಸ್ಯೆಯಿಂದಾಗಿ ತಂಡದಲ್ಲಿ ಬದಲಾವಣೆ ಮಾಡಲಾಗಿತ್ತು. ಆದರೆ, ಈಗ ಸೆಮೀಸ್ ಕದನಕ್ಕೆ ಒಂದು ಬದಲಾವಣೆ ನಿರೀಕ್ಷಿಸಲಾಗಿದೆ.

    ರೋಹಿತ್ ಶರ್ಮಾ ಮತ್ತು ರಾಹುಲ್ ದ್ರಾವಿಡ್‌ಗೆ ಪ್ಲೇಯಿಂಗ್ XI ಸಂಯೋಜನೆಯಲ್ಲಿ ಎದುರಾಳಿಗೆ ಟಕ್ಕರ್ ಕೊಡಲು ಪ್ರಯೋಗ ಮಾಡಬಹುದು. ಯಾಕೆಂದರೆ ಈ ಬಾರಿಯ ವಿಶ್ವಕಪ್​ನಲ್ಲಿ ನ್ಯೂಜಿಲೆಂಡ್ ಭಾರತವನ್ನು ಒಂದು ಬಾರಿ ಎದುರಿಸಿದೆ. ಹೀಗಾಗಿ ಭಾರತದ ಬೌಲರ್​ಗಳ ಕೆಲ ವರ್ಮವನ್ನು ಅವರು ಅರಿತಿರಬಹುದು. ಇದಕ್ಕಾಗಿ ಬೌಲಿಂಗ್ ವಿಭಾಗದಲ್ಲಿ ಹೊಸ ಆಟಗಾರ ಬರುವ ನಿರೀಕ್ಷೆಯಿದೆ.

    ರೋಹಿತ್ ಶರ್ಮಾ ಮತ್ತು ರಾಹುಲ್ ದ್ರಾವಿಡ್‌ಗೆ ಪ್ಲೇಯಿಂಗ್ XI ಸಂಯೋಜನೆಯಲ್ಲಿ ಎದುರಾಳಿಗೆ ಟಕ್ಕರ್ ಕೊಡಲು ಪ್ರಯೋಗ ಮಾಡಬಹುದು. ಯಾಕೆಂದರೆ ಈ ಬಾರಿಯ ವಿಶ್ವಕಪ್​ನಲ್ಲಿ ನ್ಯೂಝಿಲೆಂಡ್ ಭಾರತವನ್ನು ಒಂದು ಬಾರಿ ಎದುರಿಸಿದೆ. ಹೀಗಾಗಿ ಭಾರತದ ಬೌಲರ್​ಗಳ ಕೆಲ ವರ್ಮವನ್ನು ಅವರು ಅರಿತಿರಬಹುದು. ಇದಕ್ಕಾಗಿ ಬೌಲಿಂಗ್ ವಿಭಾಗದಲ್ಲಿ ಹೊಸ ಆಟಗಾರ ಬರುವ ನಿರೀಕ್ಷೆಯಿದೆ. ಉಳಿದಂತೆ ತಂಡದಲ್ಲಿ ಬದಲಾವಣೆ ಅನುಮಾನ. ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಟಿ20 ಮಾದರಿಯಂತೆ ತಂಡಕ್ಕೆ ಸ್ಫೋಟಕ ಆರಂಭ ಒದಗಿಸುತ್ತಿದ್ದಾರೆ. ಗಿಲ್ ಬ್ಯಾಟ್​ನಿಂದ ಇನ್ನೂ ಶತಕ ಬಂದಿಲ್ಲ ಎಂಬುದು ಬೇಸರವಷ್ಟೆ. ಕಿವೀಸ್ ವಿರುದ್ಧ ದೊಡ್ಡ ಸ್ಕೋರ್ ಮಾಡುತ್ತಾರ ನೋಡಬೇಕು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts