More

    ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ; ನಾಳೆ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್

    ಬೆಂಗಳೂರು: ಮಧ್ಯ ಮಹಾರಾಷ್ಟ್ರದಿಂದ ತಮಿಳುನಾಡುವರೆಗೆ ತೇವಾಂಶಭರಿತ ಮೋಡಗಳು (ಟ್ರಫ್​) ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ 5 ದಿನ ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಗಾಳಿಯ ಒತ್ತಡ ಕಡಿಮೆ ಆಗಿರುವ ಪರಿಣಾಮ ತೇವಾಂಶ ಭರಿತ ಮೋಡಗಳು ಸೃಷ್ಟಿಯಾಗಿವೆ. ಇದರ ಪರಿಣಾಮ ಕರಾವಳಿಯ ದಕ್ಷಿಣ ಕನ್ನಡದಲ್ಲಿ ಏ.13ರಿಂದ ಏ.16ರವರೆಗೆ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ. ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಏ.14ರಿಂದ ಮುಂದಿನ ಮೂರು ದಿನ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಇರಲಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 72 ತಾಸು ಸಾಧಾರಣೆ ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

    ಇದನ್ನೂ ಓದಿ: ಸಂಚಾರ ನಿಯಮ ಉಲ್ಲಂಘಿಸಿದ್ದಲ್ಲದೆ ನಂಬರ್​ ಪ್ಲೇಟ್ ಮರೆಮಾಚಿ ಪರಾರಿ!; ದಂಡ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಪ್ರಚಂಡರು..

    ಬೇರೆ ರಾಜ್ಯದಲ್ಲಿಯೂ ಮಳೆ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ತಮಿಳುನಾಡು, ಕೇರಳ, ಮಧ್ಯಪ್ರದೇಶ, ತೆಲಂಗಾಣ ಸೇರಿ ದೇಶದ ವಿವಿಧ ರಾಜ್ಯಗಳಲ್ಲಿ ಮುಂದಿನ 5 ದಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮೂನ್ಸೂಚನೆ ನೀಡಿದೆ. ದಕ್ಷಿಣ ತಮಿಳುನಾಡು, ಕೇರಳ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಏ.14ರಿಂದ ಏ.16ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಗಂಟೆಗೆ 30-40 ಕಿಮೀ. ಗಾಳಿ ಬೀಸಲಿದೆ. ಮಧ್ಯಪ್ರದೇಶ, ವಿದರ್ಭ, ತೆಲಂಗಾಣ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ ಹಾಗೂ ಒಡಿಶಾದಲ್ಲಿ ಮುಂದಿನ 5 ದಿನ ಮಳೆಯಾಗಲಿದೆ.

    ಇದನ್ನೂ ಓದಿ: ಶಾಸಕರ ಪುತ್ರನ ಮೇಲೆಯೇ ಹಲ್ಲೆ; ಕಾರನ್ನು ಹಿಂಬಾಲಿಸಿಕೊಂಡು ಬಂದು ಕಪಾಳಕ್ಕೆ ಹೊಡೆದರು!?

    ಏ.14ರಂದ 16ರವರೆಗೆ ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ತಿಸ್ತಾನ್, ಮುಜರ್‌ಬಾದ್, ಹಿಮಾಚಲ ಪ್ರದೇಶದಲ್ಲಿ ಆಲಿಕಲ್ಲು ಮಳೆ ಬೀಳಲಿದೆ. ಏ.14,15ರಂದು ಪಶ್ಚಿಮ ರಾಜಸ್ಥಾನದಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಜತೆಗೆ, ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. ದೇಶದ ನಾನಾ ಭಾಗಗಳಲ್ಲಿ ಮಳೆ ಬೀಳುವ ಹಿನ್ನೆಲೆಯಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಮಹತ್ವದ ಬದಲಾವಣೆಗಳಿಲ್ಲ ಎಂದು ಐಎಂಡಿ ತಿಳಿಸಿದೆ.

    ಇದನ್ನೂ ಓದಿ: ಪೊಲೀಸರ ವಿರುದ್ಧ ಉದ್ರಿಕ್ತರಾದ ಜನರು; ಆರಕ್ಷಕರಿಂದ ತಪ್ಪಿಸಿಕೊಳ್ಳುವಾಗ ಬೈಕ್​ನಿಂದ ಬಿದ್ದ ತಾಯಿ-ಮಗನಿಗೆ ಗಾಯ…

    ರಾಜ್ಯದಲ್ಲಿ ಮತ್ತೆ ಲಾಕ್​ಡೌನ್?!; ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಹೇಳಿದ್ದೇನು?​

    ನೀನ್​ ಚೆನ್ನಾಗಿರು ದೇವ್ರು.. ನಿನ್​ ಹೆಂಡ್ತಿ-ಮಕ್ಳು ಚೆನ್ನಾಗಿರ್ಲಿ; ಮುಷ್ಕರನಿರತ ಸಾರಿಗೆ ನೌಕರರಿಂದ ಗಾಂಧಿಗಿರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts