ರಾಜ್ಯಾದ್ಯಂತ ಬಿರುಸಿನ ಮಳೆ! ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ಜೋರಾಗಲಿದೆ ವರುಣನ ಅಬ್ಬರ | Rain

heavy rains
Published on

ಬೆಂಗಳೂರು: ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ವರುಣನ ಆರ್ಭಟ (Heavy Rain) ಜೋರಾಗಿದ್ದು, ನಗರದ ಹಲವು ಪ್ರದೇಶಗಳು ನಿರಂತರ ಮಳೆಯಿಂದ ಜಲಾವೃತಗೊಂಡಿವೆ. ಇನ್ನು ಈ ಮಧ್ಯೆ ರಸ್ತೆ ಸಂಚಾರಕ್ಕೆ ಭಾರೀ ಅಡಚಣೆ ಉಂಟಾಗಿದ್ದು, ಜನರು ಮನೆಯಿಂದ ಹೊರಬರಲು ಹೆಣಗಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಮಲೆನಾಡಿನ ಕಳೆ ಹೊತ್ತ ಬೆಂಗಳೂರು

ಮೊದಲು ಜಿಟಿಜಿಟಿಯಿಂದ ಪ್ರಾರಂಭವಾಗುವ ವರುಣ, ನಂತರದಲ್ಲಿ ಬಿರುಸಿನಿಂದ ಸುರಿಯುತ್ತಿದ್ದು, ಸಂಪೂರ್ಣ ಬೆಂಗಳೂರು ಇದೀಗ ಮಲೆನಾಡಿನಂತಾಗಿದೆ. ನಿರಂತರವಾಗಿ ಧರೆಗೆ ಇಳಿಯುತ್ತಿರುವ ವರುಣನ ಆರ್ಭಟಕ್ಕೆ ತತ್ತರಿಸಿರುವ ಬೆಂಗಳೂರು ಜನತೆ, ಸದ್ಯ ತಮ್ಮ ಮನೆಯಿಂದ ಹೊರಬರಲು ಸಾಧ್ಯವಾಗದ ಪರಿಸ್ಥಿತಿ ತಲುಪಿದ್ದಾರೆ. ಇನ್ನು ಈ ಮಧ್ಯೆ ಹವಾಮಾನ ಇಲಾಖೆ ಹೊಸ ವರದಿಯೊಂದು ಪ್ರಕಟಿಸಿದ್ದು, ಮುಂದಿನ ಐದು ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಬೀಳುವ ಮುನ್ಸೂಚನೆ ನೀಡಿದೆ.

5 ದಿನ ವರುಣ ಆರ್ಭಟ

ಕರಾವಳಿ ಜಿಲ್ಲೆಗಳಾದ.ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ಭಾರೀ ಮಳೆಯಾಗಲಿದ್ದು, ಗುಡುಗು ಸಹಿತ ನಿರಂತರ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರಿನ ಪ್ರತ್ಯೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆ ಸುರಿಯಲಿದೆ. ದಕ್ಷಿಣ ಒಳ ಕರ್ನಾಟಕದ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮತ್ತು  ತುಮಕೂರು ಜಿಲ್ಲೆಗಳಲ್ಲಿ ಹಗುರ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ವರದಿಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net